spot_img
Monday, March 16, 2026
spot_img

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ | ಕೇಂದ್ರ ವಿತ್ತಸಚಿವರನ್ನು ಭೇಟಿ ಮಾಡಿದ ಸಿಎಂ | ರಾಜ್ಯದ ನ್ಯಾಯಯುತ ಪಾಲು ನೀಡುವಂತೆ ಸಿಎಂ ಮನವಿ

ಜನಪ್ರತಿನಿಧಿ (ನವ ದೆಹಲಿ) : ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬ0ಧಿಸಿದ0ತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ಅವರು ವಿನಂತಿಸಿಕೊ0ಡರು.

ಅವರು ಇಂದು (ಮಂಗಳವಾರ) ತೆರಿಗೆ ಹಂಚಿಕೆಗೆ ಸಂಬ0ಧಿಸಿದ0ತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿನಂತಿಸಿಕೊ0ಡರು.

15ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ. ಇದಲ್ಲದೆ, 15ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿದೆ ಎಂದು ಹೇಳಿದ್ದಾರೆ.

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ, ಏಕೆಂದರೆ ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕೆಂದು ಹಣಕಾಸು ಆಯೋಗದ ಮುಂದೆ ಪ್ರಸ್ತಾಪಿಸಿದ್ದೇವೆ. ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಪ್ರಸ್ತಾಪಿಸಿ, ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ವಿತ್ತಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಕರ್ನಾಟಕದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಪರಿಗಣಿಸಬೇಕು. 16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಸಲ್ಲಿಸುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರ್ಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಮನವಿ ಮಾಡಲಾಗಿದ್ದು, ಎಲ್ಲಾ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂಬುದನ್ನು ಸಿಎಂ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!