spot_img
Monday, March 16, 2026
spot_img

ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ : ಬೆಂಗಳೂರಿನ ಖಾಸಗಿ ಕಾಲೇಜುಗಳ ಮೇಲೆ ಇ.ಡಿ ದಾಳಿ !

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರಿನ ಕೆಲವು ಖಾಸಗಿ ಕಾಲೇಜುಗಳಲ್ಲಿ ನಡೆದ ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕಾಶ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಮತ್ತು ನ್ಯೂ ಹೊರೈಜನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಂತಹ ಕಾಲೇಜುಗಳ ಆವರಣಗಳು, ಬಿಎಂಎಸ್‌ನ ಟ್ರಸ್ಟಿಗಳು ಮತ್ತು ಅವರ ಪ್ರಮುಖ ಸಹಚರರು ಮತ್ತು ಕೆಲವು ಶಿಕ್ಷಣ ಸಲಹೆಗಾರರು ಮತ್ತು ಏಜೆಂಟ್‌ಗಳಿಗೆ ಸಂಬಂಧಿಸಿದ ಸ್ಥಳಗಳಳ್ಲಿ ಶೋಧಕಾರ್ಯ ನಡೆಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರದ ತನಿಖಾ ಸಂಸ್ಥೆಯ ಬೆಂಗಳೂರು ವಲಯ ಘಟಕವು ತನಿಖೆಯನ್ನು ನಡೆಸುತ್ತಿದೆ ಎಂದು ಅವರು ಹೇಳಿದರು.

ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಎಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ KEA ಅಧಿಕಾರಿಗಳು ಈ ಹಿಂದೆ ಪೊಲೀಸರಿಗೆ ದೂರು ದಾಖಲಿಸಿದ್ದರು. KEA ಪಟ್ಟಿಯಂತೆ ಕಾಲೇಜುಗಳಲ್ಲಿ ಸೀಟು ಹಂಚಿಕೆ ಆಗುತ್ತಿಲ್ಲ. ಸೀಟು ನೀಡಲು ಲಕ್ಷಾಂತರ ರೂಪಾಯಿ ಹಣಕ್ಕೆ ಕಾಲೇಜು ಆಡಳಿತ ಮಂಡಳಿ ಬ್ಲಾಕ್ ಮಾಡುತ್ತಿವೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!