spot_img
Monday, March 16, 2026
spot_img

ಕೇಂದ್ರ ಸರ್ಕಾರ, ಹೊರ ರಾಜ್ಯಗಳು, ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ ಆಡಳಿತದಲ್ಲಿ ಕನ್ನಡ ಕಡ್ಡಾಯ : ಶಾಲಿನಿ ರಜನೀಶ್ ಸುತ್ತೋಲೆ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯ ಸರ್ಕಾದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಈ ಸೂಚನೆಯನ್ನು ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿಯೇ ಆಡಳಿತ ನಡೆಸುವ ಬಗ್ಗೆ ಈಗಾಗಲೇ ಹಲವು ಭಾರಿ ಸೂಚನೆಗಳನ್ನು ಹೊರಡಿಸಿದ್ದರೂ ಪಾಲನೆ ಆಗುತ್ತಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವರದಿ ಮಾಡುತ್ತಲೇ ಇದೆ. ಹೀಗಾಗಿ ಈ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.

‘ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಕನ್ನಡ ಇರಬೇಕು ಎಂದು ‘ಕರ್ನಾಟಕ ರಾಜ್ಯ ಭಾಷಾ ಕಾಯ್ದೆ 1963 ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲೇ ಉತ್ತರಿಸಬೇಕು. ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರಗಳು, ಗಮನ ಸೆಳೆಯುವ ಸೂಚನೆ ಇತ್ಯಾದಿಗಳು ಕನ್ನಡದಲ್ಲಿಯೇ ಕಡ್ಡಾಯವಾಗಿ ಹೊರಡಿಸಬೇಕು ಎಂದು ಅವರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ.

ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡುವಂತೆ, ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲೇ ಇರುವಂತೆಯೂ ತಿಳಿಸಲಾಗಿದೆ. ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡಾವಳಿಗಳನ್ನು ಕನ್ನಡದಲ್ಲಿ ತಯಾರಿಸಿ ಸರ್ಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವಂಎತ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲೇ ಇರುವಂತೆ ಸೂಚಿಸಲಾಗಿದೆ ಎಂದು ಅವರು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸರ್ಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳನ್ನು ಕನ್ನಡದಲ್ಲಿ ಮಾಡುವಂತೆ ಸೂಚಿಸಿದ್ದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳದಿರುವುದನ್ನು ಗಮನಿಸಿರುವ ಮುಖ್ಯಮಂತ್ರಿ, ಕನ್ನಡದಲ್ಲಿ ಇಲ್ಲದೇ ಇದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯಲು ನಿರ್ದೇಶನ ನೀಡಿದ್ದಾರೆ. ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲಾ ಅಧಿಕಾರಿಗಳ ಮತ್ತು ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅವರು ಪುನರುಚ್ಚರಿಸಿದ್ದಾರೆ.
ಕೆಡಿಪಿ ಸಭೆಯ ಕಾರ್ಯಸೂಚಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಆಂಗ್ಲ ಭಾಷೆಯಲ್ಲಿ ಹೊರಡಿಸುತ್ತಾರೆ. ವಿಶೇಷವಾಗಿ ಕಾಮಗಾರಿ ನಡೆಸುವ ಇಲಾಖೆಗಳು ಮಾಹಿತಿಗಳನ್ನು ಆಂಗ್ಲ ಭಾಷೆಯಲ್ಲಿ ಮಂಡಿಸುತ್ತಿದೆ. ಇದನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅನುಮೋದಿಸುತ್ತಿದ್ದಾರೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ವರಿದ ನೀಡಿದ್ದಾರೆ ಎಂದೂ ಸುತ್ತೋಲೆಯಲ್ಲಿ ಮುಖ್ಯ ಕಾರ್ಯದರ್ಶಿ ವಿವರಣೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!