spot_img
Friday, January 30, 2026
spot_img

ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಆದೇಶಗಳು ನಮ್ಮ ವಿರುದ್ಧವಾಗಿ ಬರುತ್ತಿವೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ನ್ಯಾಯಾಲಯಗಳಲ್ಲಿ ಸರ್ಕಾರದ ಪರ ವಕೀಲರು ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ಹಲವು ಪ್ರಕರಣಗಳಲ್ಲಿ ನಾವು ಹಿನ್ನಡೆ ಅನುಭವಿಸುವಂತಾಗಿದೆ. ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಆದೇಶಗಳು ನಮ್ಮ ವಿರುದ್ಧವಾಗಿ ಬರುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಕೋಮುವಾದ, ದ್ವೇಷ ಭಾಷಣ ಮುಂತಾದ ಪ್ರಕರಣಗಳಲ್ಲಿ ಪೊಲೀಸ್ ಎಫ್.ಐ.ಆರ್ ದಾಖಲಾದ ನಂತರ ಕೂಡ ಸುಲಭವಾಗಿ ತಡೆಯಾಜ್ಞೆ ದೊರೆಯುತ್ತದೆ. ತಡೆಯಾಜ್ಞೆಯನ್ನು ವರ್ಷಗಟ್ಟಲೆ ತೆರವುಗೊಳಿಸದೆ ಇಡುವ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ ಎಂದವರು ಹೇಳಿದರು.

ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ಪ್ರಕರಣಗಳಲ್ಲಿ ಸಹ ಸರ್ಕಾರಕ್ಕೆ ಮುಜುಗುರವಾಗುವಂತಹ ಬೆಳವಣಿಗೆಗಳು ಆಗಿವೆ. ನಿಮ್ಮ ತಪ್ಪುಗಳಿಂದ ನಮಗೆ ಮುಜುಗರವುಂಟಾಗುವ ಪರಿಸ್ಥಿತಿ ಬರಬಾರದು. ನೀವೆಲ್ಲರೂ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಇದಕ್ಕೆ ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!