spot_img
Wednesday, April 1, 2026
spot_img

ನಮ್ಮಲ್ಲಿ ಎಲ್ಲವೂ ಸರಿ ಇಲ್ಲ | ಯಾರನ್ನಾದರೂ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿ : ಸದಾನಂದ ಗೌಡ

ಜನಪ್ರತಿನಿಧಿ (ಬೆಂಗಳೂರು) : ‘ನಮ್ಮಲ್ಲಿ ಎಲ್ಲವೂ ಸರಿ ಇಲ್ಲ. ಆಂತರಿಕ ವ್ಯತ್ಯಾಸ ಒಳಗೊಳಗೇ ಕುದಿಯುತ್ತಿದೆ. ಎಲ್ಲಾ ಸರಿ ಇದೆ ಎಂದು ಕಂಡರೂ ಬೂದಿ ಮುಚ್ಚಿದ ಕೆಂಡದ ಸ್ಥಿತಿ ಇದೆ ಎಂದು ಕೇಂದ್ರ ಮಾಜಿ ಸಚಿವ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ, ಯಾರನ್ನಾದರೂ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿ. ಆದರೇ ಸಂಘಟನಾ ವೇಗಕ್ಕೆ ತಡೆ ಮಾಡಬಾರದು. ಇದರಿಂದ ಪಕ್ಷಕ್ಕೆ ಭಾರಿ ಹಿನ್ನೆಡೆ ಆಗುತ್ತದೆ ಎಂದು ಹೇಳಿದರು.

ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಪಕ್ಷದ ಕಾರ್ಯಕರ್ತರು ಕೆಲಸ ಮಾಡಲು ಸಿದ್ಧರಾಗಿದ್ದಾರೆ. ಈ ಬಗ್ಗೆ ಒಬ್ಬೊಬ್ಬರು ಒಂದು ರೀತಿಯ ಹೇಳಿಕೆ ನೀಡದಂತೆ ವರಿಷ್ಠರು ಕಡಿವಾಣ ಹಾಕಬೇಕಿದೆ ಎಂದು ಹೇಳಿದರು.

ನಮ್ಮಲ್ಲಿ ಪ್ರಮುಖ ನಾಯಕರ ಸಮಿತಿ ಇದೆ. ಅದು ಸಂಪ್ರದಾಯದ0ತೆ ಸಭೆ ಸೇರುತ್ತದೆ. ಆದರೇ, ಅಲ್ಲಿ ವಿಷಯಾಧಾರಿತ ಚರ್ಚೆ ನಡೆಯುತ್ತಿಲ್ಲ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ನಾಯಕರ ಸಮಿತಿ ಸದಸ್ಯರು, ಪಕ್ಷ ಕಟ್ಟಿ ಬೆಳೆಸಿದ ಪ್ರಮುಖರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಹೇಳಿದರು.

ಪಕ್ಷದಲ್ಲಿ ಶುದ್ದೀಕರಣ ಆರಂಭವಾಗಿದೆ. ಈ ಕೆಲಸ ಪ್ರೋಕ್ಷಣೆಯಿಂದ ಆಗುವುದಿಲ್ಲ. ಅದೂ ಕೂಡ ಒಳ್ಳೆಯ ರೀತಿಯಲ್ಲಿ ಆಗಬೇಕು. ಕೆಲವರನ್ನು ಹೊರಗೆ ಹಾಕುವ ಮೂಲಕ ಶುದ್ಧೀಕರಣ ಆರಂಭವಾಗಿದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!