spot_img
Wednesday, April 1, 2026
spot_img

ಕೆಂಪೇಗೌಡರು ಆಧುನಿಕ ಬೆಂಗಳೂರಿನ ನಿರ್ಮಾತೃರು : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯ ಆಡಳಿತಗಾರರಾಗಿದ್ದರು. ಆಧುನಿಕ ಬೆಂಗಳೂರಿನ ನಿರ್ಮಾತೃಗಳು ಕೂಡ ಅವರೇ ಆಗಿದ್ದಾರೆ ಎಣದಯ ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು(ಶುಕ್ರವಾರ) ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರವು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸುತ್ತಿದೆ. 2013-18 ರ ಅವಧಿಯಲ್ಲಿ ನಾವು ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಕೆಂಪೇಗೌಡರ ಜನ್ಮದಿನಾಂಕವನ್ನು ತಿಳಿದು, ಅಂದಿನಿAದ ನಿರಂತರವಾಗಿ ಜಯಂತಿಯನ್ನು ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಬೆಂಗಳೂರು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು. ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಹೆಮ್ಮೆಯಿಂದ ಮಾಡಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ. ಬೆಂಗಳೂರು ಅಭಿವೃದ್ಧಿ ಮಾಡುವ ಕೆಂಪೇಗೌಡರ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!