spot_img
Friday, April 3, 2026
spot_img

ಜು.1: ಉಡುಪಿ ಪತ್ರಕರ್ತರ ಸಂಘದಿ0ದ ಪತ್ರಿಕಾ ದಿನಾಚರಣೆ

ಜನಪ್ರತಿನಿಧಿ (ಉಡುಪಿ): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10:30ಕ್ಕೆ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಉದ್ಘಾಟಿಸಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ, ಅಂಕಣಕಾರ ರಾಜಾರಾಮ್ ತಲ್ಲೂರು ‘ಮಾಧ್ಯಮ: ಮುಂದಿನ 10ವರ್ಷಗಳ ಮೀಡಿಯಾ ಕನ್ವರ್ಜೆನ್ಸ್, ಎಲ್ ಎಲ್‌ಎಂ’ ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಮಣಿಪಾಲ ಎಚ್‌ಪಿಆರ್ ಸಂಸ್ಥೆಗಳ ಮುಖ್ಯಸ್ಥ ಹರಿಪ್ರಸಾದ್ ರೈ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ. ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಲೆವೂರು ದಿನೇಶ್ ಕಿಣಿ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಕುಂಜೂರು ಲಕ್ಷ್ಮೀನಾರಾಯಣ ಕುಂಡ0ತಾಯಗೆ ಪ್ರತಿಕಾ ದಿನದ ಗೌರವವನ್ನು ಸಲ್ಲಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!