spot_img
Monday, March 16, 2026
spot_img

ಸಿದ್ದಾಪುರ-ಹೆಬ್ರಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ನಿಷೇಧ

ಜನಪ್ರತಿನಿಧಿ (ಉಡುಪಿ) : ಜಿಲ್ಲೆಯ ಹೆಬ್ರಿ ತಾಲೂಕಿನ ಸಿದ್ಧಾಪುರ-ಹೆಬ್ರಿ ರಾಜ್ಯ ಹೆದ್ದಾರಿಯಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡ ರಸ್ತೆ ಹಾಗೂ ಮೋರಿಯನ್ನು ರಕ್ಷಣಾ ತಡೆಗೋಡೆಯೊಂದಿಗೆ ಪುನರ್ ನಿರ್ಮಿಸುವ ಕಾಮಗಾರಿ ಹಿನ್ನೆಲೆಯಲ್ಲಿ 30-07-2025 ರವರೆಗೆ ಸಿದ್ದಾಪುರ-ಹೆಬ್ರಿ(ಹೆಬ್ರಿ-ಕುಚೂರು-ಕಂಚರಕಾಳ-ಮಾ0ಡಿಮೂರಕೈ) ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಬದಲಿ ಮಾರ್ಗವಾಗಿ ಗ್ರಾಮೀಣ ರಸ್ತೆಯಾದ ಮಾಂಡಿಮೂರುಕೈ-ಮೀನುಗದ್ದೆ-ಬೇಳ0ಜೆ-ಕುಚೂರು-ಹೆಬ್ರಿ ರಸ್ತೆ ಮುಖಾಂತರ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

ರಸ್ತೆ ಹಾಗೂ ಮೋರಿಯ ತಡೆಗೋಡೆಯೊಂದಿಗೆ ಪುನರ್ ನಿರ್ಮಿಸುವ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ಕಲಂ 221(ಎ)(2) & (5) ರನ್ವಯ, 30-07-2025 ರವರೆಗೆ ಸಿದ್ದಾಪುರ-ಹೆಬ್ರಿ(ಹೆಬ್ರಿ-ಕುಚೂರು-ಕಂಚರಕಾಳ-ಮಾ0ಡಿಮೂರುಕೈ) ರಾಜ್ಯ ಹೆದ್ದಾರಿಯ ಮಾರ್ಗದಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ತಾತ್ಕಾಲಿಕವಾಗಿ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದ್ದು, ಮಾಂಡಿಮೂರಕ್ಕೆ-ಮೀನುಗದ್ದೆ-ಬೇಳAಜೆ-ಕುಚೂರು-ಹೆಬ್ರಿ ರಸ್ತೆಯ ಮೂಲಕ ಎಲ್ಲಾ ವಾಹನಗಳು ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!