spot_img
Wednesday, March 18, 2026
spot_img

ಬಸ್ರೂರು ಶಾರದಾ ಕಾಲೇಜಿನಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಕುಂದಾಪುರ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ಇದರ ೨೦೨೫-೨೦೨೬ ನೇ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಪೈ ವಹಿಸಿದ್ದರು.

ಸರಕಾರಿ ಪ್ರೌಢಶಾಲೆ ಬಸ್ರೂರು ಇಲ್ಲಿನ ಮುಖ್ಯೋಪಾಧ್ಯಾಯರಾದ ಸುಜಾತ ತಂತ್ರಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ವಿವಿಧ ಸಂಘಗಳ ಪಾತ್ರ ಬಹುಮುಖ್ಯ ಹಾಗೂ ವಿವೇಚನಾ ಶಕ್ತಿ ಹೆಚ್ಚಿದಂತೆ ತಮ್ಮ ದೌರ್ಬಲ್ಯಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ತಿಳಿಸಿದರು. ಹಿಂದಿ ಉಪನ್ಯಾಸಕಿ ಸುಹಾನ ಸ್ವಾಗತಿಸಿದರು. ಶಿಕ್ಷಣ ಶಾಸ್ತ್ರ ಉಪನ್ಯಾಸಕಿ ಸರಸ್ವತಿ ಅತಿಥಿ ಪರಿಚಯಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶಿಲ್ಪಾ ವಂದಿಸಿದರು. ಇತಿಹಾಸ ಉಪನ್ಯಾಸಕಿ ಆಶಾ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!