spot_img
Tuesday, March 17, 2026
spot_img

ಮೂಡುಬಗೆ ಶಾಲೆಯಲ್ಲಿ “ತೆರೆದ ಮನೆ”: ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ ಜಾಗೃತಿ

ಅಂಪಾರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂಪಾರು ಮೂಡುಬಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಮಕ್ಕಳ ಸುರಕ್ಷತಾ ಮಾಹಿತಿ ಶಿಬಿರ ಶಂಕರನಾರಾಯಣ ಪೊಲೀಸ್ ಠಾಣೆ, ಇವರ ವತಿಯಿಂದ ತೆರೆದ ಮನೆ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಂಕರನಾರಾಯಣ ಆರಕ್ಷಕ ಠಾಣೆಯ ಎ.ಎಸ್.ಐ. ಜನಾರ್ಧನ್ ಅವರು ವಿದ್ಯಾರ್ಥಿಗಳಿಗೆ ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ತಡೆಗಟ್ಟುವ ಕ್ರಮ, ಬಾಲ್ಯ ವಿವಾಹ, ಪೋಕ್ಸೋ, ಪೊಲೀಸ್ ವ್ಯವಸ್ಥೆ, ಸಂಚಾರ ನಿಯಮಗಳು, ಮಾದಕ ದ್ರವ್ಯಗಳ ವ್ಯಸನದಿಂದ ಆಗುವ ದುಷ್ಪರಿಣಾಮಗಳು ಹಾಗೂ ಕಾನೂನು ನೀಡುವ ಗರಿಷ್ಠ ಶಿಕ್ಷೆಗಳ ಬಗ್ಗೆ ಅರಿವು, ಮೊಬೈಲ್ ಯಿಂದ ಉಂಟಾಗುವ ತೊಂದರೆ, ಯೋಗ ಮಾಡುವುದರಿಂದ ಉಂಟಾಗುವ ಪ್ರಯೋಜನ ಇವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಅಂಪಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೋಪಾಲಕೃಷ್ಣ ಕಿಣಿ, ಶಂಕರನಾರಾಯಣ ಆರಕ್ಷಕ ಠಾಣೆಯ ಸಿಬ್ಬಂದಿಯಾದ ಸಚಿನ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನೋಹರ್ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾದ ರಮೇಶ್ ಕನ್ನಾಲಿ, ಮುಖ್ಯ ಶಿಕ್ಷಕರಾದ ಮಂಜುನಾಥ್ ಶೆಟ್ಟಿ, ಸಹಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಂಕರನಾರಾಯಣ ಆರಕ್ಷಕ ಠಾಣೆಯ ಸಿಬ್ಬಂದಿಗಳಿಗೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಗೌರವ ಸ್ಮರಣಿಕೆ ನೀಡಲಾಯಿತು.

ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರ ವೃಂದ, ಶಾಲಾ ಅಭಿವೃದ್ಧಿ ಸಮಿತಿ, ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!