spot_img
Monday, March 16, 2026
spot_img

ರೋಟರಿ ವಲಯ 2ರ ಸಹಾಯಕ ಗವರ್ನರಾಗಿ ಶ್ಯಾಮಸುಂದರ ನಾಯರಿ ಆಯ್ಕೆ 

ಕೋಟ: ರೋಟರಿ ವಲಯ ೨ರ ಸಹಾಯಕ ಗವರ್ನರಾಗಿ ಶ್ಯಾಮಸುಂದರ ನಾಯರಿ ಆಯ್ಕೆಯಾಗಿದ್ದಾರೆ. ವಲಯ 2ರ ವ್ಯಾಪ್ತಿಯಲ್ಲಿ 6 ಕ್ಲಬ್‌ಗಳಿಗೆ ಸಹಾಯಕ ಗವರ್ನರ್ ಆಗಿ ಮಾರ್ಗದರ್ಶನ ನೀಡಲಿದ್ದಾರೆ. ಇವರು 2005ನೇ ಇಸವಿಯಲ್ಲಿ ರೋಟರಿಗೆ ಪಾದಾರ್ಪಣೆ ಮಾಡಿದ್ದು, 2010-11ರಲ್ಲಿ ರೋಟರಿ ಕೋಟ ಸಾಲಿಗ್ರಾಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅವರು. ಆ ವರ್ಷ ರೋಟರಿ ಜಿಲ್ಲೆಯಲ್ಲಿ ಬೆಸ್ಟ್ ಕ್ಲಬ್ ಅವಾರ್ಡ್ ಪಡೆದುಕೊಂಡಿದ್ದಾರೆ. 2018ರಲ್ಲಿ ಝೋನಲ್ ಲೆಪ್ಟ್‌ನಂಟ್ ಆಗಿ, ತದನಂತರ ರೋಟರಿಯಲ್ಲಿ ವಲಯ ಮತ್ತು ಜಿಲ್ಲಾ ಮಟ್ಟದ ಹುದ್ದೆಗಳನ್ನು ನಿಭಾಯಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಕಾನೂನು ಪ್ರಕೋಷ್ಠದ ಸಹ-ಸಂಚಾಲಕರಾಗಿ, ರಾಜ್ಯ ಕಾನೂನು ಪ್ರಕೋಷ್ಠದ ಸಂಚಾಲಕರಾಗಿ, ಕೋಟ ಸಹಕಾರಿ ವ್ಯವಸಾಯಕ ಸಂಘ ಮಾಜಿ ನಿರ್ದೇಶಕರಾಗಿ, ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಸದಸ್ಯರಾಗಿ, ಶ್ರೀ ಅಘೋರೇಶ್ವರ ದೇವಸ್ಥಾನದ ಕಾರ್ಯದರ್ಶಿಯಾಗಿ ರಾಷ್ಟ್ರೀಯ ಹೆದ್ದಾರಿಯ ಹೋರಾಟ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ೨೦೦೦ನೇ ಇಸವಿಯಿಂದ ಕುಂದಾಪುರದಲ್ಲಿ ವಕೀಲ ವೃತ್ತಿ ಆರಂಭಿಸಿದ್ದು, ಭಾರತ ಸರಕಾರದ ನೋಟರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!