spot_img
Monday, March 16, 2026
spot_img

ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿ ಎದುರು ಬಿಜೆಪಿ ಪ್ರತಿಭಟನೆ

ಕುಂದಾಪುರ: ಶಂಕರನಾರಾಯಣ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯನ್ನು ವಜಾಗೊಳಿಸಿ ಆದೇಶ ಮಾಡಿರುವ ವಿರುದ್ಧ ಹಾಗೂ ಕೋಟ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕಿ ಉಮಾ ಗಾಣಿಗ ಅವರ ಸ್ಥಾನ ಅನೂರ್ಜಿತಗೊಳಿಸುವಂತೆ ಆದೇಶದ ವಿರುದ್ದ ಬಿಜೆಪಿ ಬೈಂದೂರು ಹಾಗೂ ಕುಂದಾಪುರ ಮಂಡಲದ ವತಿಯಿಂದ ಕುಂದಾಪುರದ ಸಹಾಯಕ ನಿಬಂಧಕರ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ಸರಕಾರಿ ಅಧಿಕಾರಿಗಳು ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕು, ಯಾರದ್ದೋ ಒತ್ತಡಕ್ಕೆ ಒಳಗಾಗಿ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿದರೆ ಉಡುಪಿ ಜಿಲ್ಲೆಯಲ್ಲಿ ಅದು ಹೆಚ್ಚುದಿನ ಉಳಿಯುವುದಿಲ್ಲ. ಪ್ರಾಮಾಣಿಕವಾಗಿ, ಕಾನೂನುಬದ್ದವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ಸದಾ ಬಿಜೆಪಿಯ ಬೆಂಬಲವಿದೆ ಎಂದರು.
ಈ ಎರಡು ಘಟನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕುಂದಾಪುರ ಮಂಡಲದ ಮಾಜಿ ಅಧ್ಯಕ್ಷ ಶಂಕರ ಅಂಕದಕಟ್ಟೆ ಮಾತನಾಡಿ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಜನವರಿ ೧೯ಕ್ಕೆ ಚುನಾವಣೆ ನಡೆದಿದ್ದು ಉಮಾ ಗಾಣಿಗ ಅವರು ಒಂದು ಮತದಿಂದ ವಿಜೇತರಾಗಿದ್ದು, ಈಗ ಅವರನ್ನು ನಿರ್ದೇಶಕ ಸ್ಥಾನದಿಂದ ವಜಾ ಮಾಡಿ ಆದೇಶ ಮಾಡಿರುವುದು ಖಂಡನಾರ್ಯ. ಅಧಿಕಾರ ದುರುಪಯೋಗ ಮಾಡಿಕೊಳ್ಳುವ ಅಧಿಕಾರಿಗಳ ಮೇಲೆ ಸಮಗ್ರ ತನಿಖೆ ನಡೆಯಬೇಕು ಎಂದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಶಂಕರನಾರಾಯಣ ಹಾಲು ಉತ್ಪಾದಕರ ಸಹಕಾರ ಸಂಘ ಮಾಜಿ ಅಧ್ಯಕ್ಷ ಸುಧಾಕರ ಕುಲಾಲ್ ಮಾತನಾಡಿ, ಶಂಕರನಾರಾಯಣ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿಯನ್ನು ಏಕಾ‌ಏಕಿಯಾಗಿ ವಜಾ ಮಾಡಿರುವುದರ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಸಹಕಾರ ಇಲಾಖೆಯ ಗಮನಕ್ಕೆ ತಂದಿದ್ದು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದರು.

ಕೋಟ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಸುರೇಶ ಕುಂದರ್, ರಂಜಿತ್, ಅಜಿತ್ ಕೋಟ, ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷೆ ಅನಿತಾ ಆರ್.ಕೆ., ಬೈಂದೂರು ಮಂಡಲದ ನಿಕಟಪೂರ್ವ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ಉಮೇಶ ಶೆಟ್ಟಿ ಕಲ್ಗದ್ದೆ, ಉಮಾ ಗಾಣಿಗ ಕೋಟ, ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ ಪೂಜಾರಿ ವಕ್ವಾಡಿ, ಸುದೀರ್ ಕೆ.ಎಸ್., ಸದಾನಂದಾ ಉಪ್ಪಿನಕುದ್ರು, ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ ವಿ., ಮಂಗಳೂರು ಸಹ ಪ್ರಭಾರಿ ರಾಜೇಶ ಕಾವೇರಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ರೋಹಿಣೀ ಪೈ, ವಿಠಲ ಪೂಜಾರಿ, ಗೀತಾಂಜಲಿ ಸುವರ್ಣ, ರವಿ ಕುಲಾಲ್, ಪಕ್ಷದ ಮುಖಂಡರು, ಪುರಸಭೆ ಸದಸ್ಯರು, ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!