spot_img
Sunday, March 15, 2026
spot_img

ನಾಡಹಬ್ಬ ಮೈಸೂರು ದಸರಾ-2025ರ ಆಚರಣೆ : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಜನಪ್ರತಿನಿಧಿ (ಬೆಂಗಳೂರು) : ನಾಡಹಬ್ಬ ಮೈಸೂರು ದಸರಾ-2025ರ ಆಚರಣೆ ಕುರಿತು ಇಂದು(ಶನಿವಾರ) ವಿಧಾನಸೌಧದಲ್ಲಿ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೈಸೂರು ನನ್ನ ಹುಟ್ಟೂರು, ನಾನು ನನ್ನ ಅಪ್ಪನ ಹೆಗಲೇರಿ ಕೂತು ದಸರಾ ಉತ್ಸವ ನೋಡುತ್ತಾ ಬೆಳೆದವನು. ಮೈಸೂರಿನವನಾದ ನನಗೆ ದಸರಾ ಎಂದರೆ ಬರಿಯ ಹಬ್ಬವಲ್ಲ, ಅದೊಂದು ಪರಂಪರೆ. ಈ ಪರಂಪರೆಯನ್ನು ಮುಂದುವರೆಸಿಕೊ0ಡು ಹೋಗುವ ಬಗ್ಗೆ ನನಗೆ ಹೆಮ್ಮೆ, ಕಾಳಜಿ ಎರಡೂ ಇದೆ. ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಇತಿಹಾಸವನ್ನು ಸಾರುವ ಈ ದಸರಾವನ್ನು ವಿಜೃಂಭಣೆಯಿ0ದ ಹಾಗೂ ಅಷ್ಟೇ ವ್ಯವಸ್ಥಿತವಾಗಿ ಆಯೋಜಿಸುವ ಬಗ್ಗೆ ಇಂದು ಸುದೀರ್ಘ ಚರ್ಚೆ ನಡೆಸಿ, ಹಲವು ಸಲಹೆ, ಸೂಚನೆಗಳನ್ನು ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು :
* ವಿಜೃಂಭಣೆ ಭರದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ.

  • ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.
  • ಈ ಬಾರಿ ರಾಜ್ಯಾದ್ಯಂತ ಮಳೆ – ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.
  • ಸೆಪ್ಟಂಬರ್ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 2 ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10 ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ.
  • ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.
  • ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
  • ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.
  • ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.
  • ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.
  • ಕಳೆದ ಬಾರಿ ವಿದ್ಯುತ್ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.
  • ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.
  • ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.
  • ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.
  • ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿ0ಬಿಸುವ0ತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ದ ಚಿತ್ರಗಳಲ್ಲಿ ಗಾ0ಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.
  • ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.
  • ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸ0ಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.
  • ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಅಗತ್ಯ ಪ್ರಮಾಣದಲ್ಲಿ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.
  • ಗೋಲ್ಡ್ ಕಾರ್ಡ್ ಯಾವುದೇ ಗೊಂದಲಕ್ಕೆ ಆಸ್ಪದವಾಗದ0ತೆ ವಿತರಿಸಬೇಕು.
  • ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.
  • ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.
  • ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡೋಣ್ ಶೋ ಆಯೋಜಿಸಲಾಗುವುದು.
  • ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.
  • ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಎಲ್ಲರಿಗೂ ಜಂಬೂಸವಾರಿ ವೀಕ್ಷಣೆಗೆ ಸೂಕ್ತ ಅವಕಾಶ ಮಾಡಿಕೊಡಲು ಕೈಗೊಳ್ಳಬೇಕಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!