spot_img
Friday, January 30, 2026
spot_img

370ನೇ ವಿಧಿ ಅಂಬೇಡ್ಕರ್ ಅವರ ಏಕ ಸಂವಿಧಾನ ಸಿದ್ಧಾಂತಕ್ಕೆ ವಿರುದ್ಧವಾಗಿತ್ತು : ಸಿಜೆಐ ಬಿ.ಆರ್ ಗವಾಯಿ

ಜನಪ್ರತಿನಿಧಿ (ನಾಗ್ಪುರ) : ಡಾ. ಬಿ.ಆರ್ ಅಂಬೇಡ್ಕರ್ ಅವರು ದೇಶವನ್ನು ಒಗ್ಗಟ್ಟಿನಿಂದ ಇರಿಸಲು ಒಂದೇ ಸಂವಿಧಾನವನ್ನು ಕಲ್ಪಿಸಿಕೊಂಡಿದ್ದರು. ಆದರೇ, ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಸಂವಿಧಾನದ ಕಲ್ಪನೆಯನ್ನು ಎಂದಿಗೂ ಬೆಂಬಲಿಸಲಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹೇಳಿದ್ದಾರೆ.

ಸಂವಿಧಾನ ಪೀಠಿಕೆ ಉದ್ಯಾನವನದ ಉದ್ಘಾಟನೆ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಅವರು, ‘ಅಂಬೇಡ್ಕರ್ ಅವರ ಏಕ ಸಂವಿಧಾನದ ಅಡಿಯಲ್ಲಿ ಅಖಂಡ ಭಾರತದ ದೃಷ್ಟಿಕೋನದಿಂದ ಸುಪ್ರೀಂ ಕೋರ್ಟ್ ಸ್ಫೂರ್ತಿ ಪಡೆದಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಮೂಲಕ ಕೇಂದ್ರ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನದ ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸರ್ವಾನುಮತದಿಂದ ಎತ್ತಿಹಿಡಿದ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠದಲ್ಲಿ ಬಿ.ಆರ್ ಗವಾವಿ ಅವರು ಕೂಡ ಒಬ್ಬರಾಗಿದ್ದರು.

ಒಂದು ದೇಶಕ್ಕೆ ಒಂದೇ ಸಂವಿಧಾನ ಇರುವುದು ಹೆಚ್ಚು ಸೂಕ್ತ. ನಾವು ದೇಶವನ್ನು ಒಗ್ಗಟ್ಟಿನಿಂದ ಇರಿಸಲು ಬಯಸಿದರೆ, ನಮಗೆ ಒಂದೇ ಸಂವಿಧಾನ ಸಾಕು. ಸಂವಿಧಾನ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವುದರ ಜತೆಗೆ ದೇಶವನ್ನು ಒಗ್ಗಟ್ಟಿನಿಂದ ಇಡುತ್ತದೆ ಎಂದು ಅವರು ಹೇಳಿದ್ದಾರೆ.

‘ನೆರೆಯ ರಾಷ್ಟçಗಳ ಪರಿಸ್ಥಿತಿಯನ್ನು ನೋಡಿ, ಅದು ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಶ್ರೀಲಂಕಾ ಆಗಿರಬಹುದು. ನಮ್ಮ ದೇಶ ಯುದ್ಧದಂತಹ ಸವಾಲುಗಳನ್ನು ಎದುರಿಸಿದಾಗೆಲ್ಲಾ ಒಗ್ಗಟ್ಟಿನಿಂದ ಉಳಿದಿದೆ ಎಂದು ಸಿಜೆಐ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!