spot_img
Monday, March 16, 2026
spot_img

ಕನಿಷ್ಠ ಮತಗಳ ಅಂತರದಿಂದ ಸೋತಾಗ ಮರು‌ಎಣಿಕೆ ಕೋರುವುದು ಕಾನೂನಾತ್ಮಕ ಹಕ್ಕು-ಡಾ,ಕೃಷ್ಣ ಕಾಂಚನ್

ಕೋಟ: ಕೋಟ ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಮಿತ್ರರು ತಂಡದಿಂದ ಚುನಾವಣೆಗೆ ಸ್ಪಧಿಸಿದ ಪ್ರೇಮಾ ಗಣೇಶ್ ಅವರು ಕೇವಲ ಒಂದು ಮತದಿಂದ ಸೋಲನ್ನಪ್ಪಿದ್ದರು. ಚುನಾವಣೆಯಲ್ಲಿ ಕನಿಷ್ಠ ಮತಗಳ ಅಂತರದಿಂದ ಸೋತಾಗ ಮರು‌ಎಣಿಕೆ ಕೋರುವುದು ಕಾನೂನಾತ್ಮಕ ಹಕ್ಕಾಗಿದ್ದು ನ್ಯಾಯಾಲಯ ಕೂಡ ಈ ಹಕ್ಕನ್ನು ಎತ್ತಿ ಹಿಡಿದಿದೆ. ಇದರಲ್ಲಿ ಗೊಂದಲ ಕಲ್ಪಿಸಿಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದು ಸಹಕಾರಿ ಮಿತ್ರರು ತಂಡದ ಮುಖಂಡ, ಕೋಟ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ತಿಳಿಸಿದರು.

ಅವರು ಜೂ.28ರಂದು ಕೋಟದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಚುನಾವಣೆಯಲ್ಲಿ ಉಮಾ ಗಾಣಿಗ ಹಾಗೂ ಪ್ರೇಮಾ ಗಣೇಶ್ ೬೨೦ಮತಗಳು ಅಸಿಂಧುವಾಗಿದ್ದವು. ಹೀಗಾಗಿ ಸಹಜವಾಗಿ ಅಸಿಂಧು ಮತಗಳನ್ನು ಪರಿಶೀಲಿಸಿದರೆ ಕೆಲವು ನಮ್ಮ ಪರವಾಗಿ ಇರಬಹುದು ಎನ್ನುವ ಆಸೆ ಎರಡೂ ಕಡೆಯವರಿಗೆ ಇರುತ್ತದೆ. ಇದು ಸಹಜ. ಅದರಂತೆ ಮರು ಎಣಿಕೆಗೆ ಅವಕಾಶ ಕೋರಲಾಗಿದೆ ಎಂದರು.

ಜೂ.೨೯ರಂದು ನಡೆಯುವ ಮರು ಎಣಿಕೆಯಲ್ಲಿ ಯಾವುದೇ ರೀತಿಯ ಫಲಿತಾಂಶ ಬಂದರೂ ಅದನ್ನು ಸ್ವೀಕರಿಸಲು ಸಿದ್ಧವಾಗಿದ್ದೇನೆ ಎಂದು ಪರಾಜಿತ ಅಭ್ಯರ್ಥಿ ಪ್ರೇಮಾ ಗಣೇಶ್ ತಿಳಿಸಿದರು.

ಎ.ಆರ್. ಕಚೇರಿ ಎದುರು ಪ್ರತಿಭಟನೆ ಮಾಡುವ ಮೂಲಕ ಬಿಜೆಪಿಯವರು ಸಹಕಾರಿ ವ್ಯವಸ್ಥೆಯನ್ನು ಸಂಪೂರ್ಣ ರಾಜಕೀಯಗೊಳಿಸಿ ಸಣ್ಣತನ ಮೆರೆದಿದ್ದಾರೆ. ಉಚ್ಛ ನ್ಯಾಯಾಲಯ ಮರು‌ಎಣಿಕೆ ಆದೇಶವನ್ನು ಪುರಸ್ಕರಿಸಿದ ಮೇಲೂ ಪ್ರತಿಭಟನೆ ಮಾಡಿರುವುದು ಕಾನೂನಿಗೆ ತೋರಿದ ಅಗೌರವವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೋಟ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ನಾಗರಾಜ ಹಂದೆ, ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ ಹಾಗೂ ನಿರ್ದೇಶಕರು, ಸಹಕಾರಿ ಮಿತ್ರರು ತಂಡದ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!