spot_img
Sunday, March 15, 2026
spot_img

ಎಕ್ಸಲೆಂಟ್, ಕುಂದಾಪುರ: ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಕುರಿತು ಕಾರ್ಯಗಾರ

ಕುಂದಾಪುರ: ಜೂನ್ ೨೭ರಂದು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಹಾಗೂ ಹೈಸ್ಕೂಲ್ ಇದರ ಆಶ್ರಯದಲ್ಲಿ ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಎನ್ನುವ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕೋಟ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಆಗಿರುವ ರಾಘವೇಂದ್ರ ಸಿ ಅವರು ಅತಿಥಿಯಾಗಿ ಆಗಮಿಸಿ ಈ ವಿಚಾರವಾಗಿ ಪ್ರಸ್ತಾಪಿಸಿ, ಇಂದಿನ ಯುವಜನತೆ ಮಾದಕ ವಸ್ತುಗಳ ದಾಸರಾಗುತ್ತಿರುವುದು ಅಪಾಯಕಾರಿಯ ಅಂಶವಾಗಿದೆ. ಮಾದಕ ವ್ಯಸನ ಮಾಡಿದ ವ್ಯಕ್ತಿಗೆ ಮಾತ್ರವಲ್ಲದೆ ಕುಟುಂಬವೂ ಸಹ ಅದರ ಪರಿಣಾಮಕ್ಕೆ ಕರಣರಾಗುತ್ತಾರೆ ಎಂದು ಹಲವರು ನಿದರ್ಶನಗಳ ಮೂಲಕ ತಮ್ಮ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಮನದಟ್ಟಾಗಿಸಿದರು.

ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ ಯವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನದ ವಿರುದ್ಧ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಹೈಸ್ಕೂಲ್ ವಿಭಾಗದ ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ ಆಚಾರ್ಯ ಸ್ವಾಗತಿಸಿದರು. ಉಪನ್ಯಾಸಕರಾದ ಶ್ರೀನಿವಾಸ್ ವೈದ್ಯರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!