spot_img
Monday, March 16, 2026
spot_img

ನಾನು-ಡಿಕೆಶಿ ಚೆನ್ನಾಗಿದ್ದೇವೆ | ನಮ್ಮ ಸರ್ಕಾರ 5 ವರ್ಷ ಬಂಡೆಯ0ತೆ ಭದ್ರ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ನಾನು, ಡಿ.ಕೆ ಶಿವಕುಮಾರ್ ಚೆನ್ನಾಗಿದ್ದೇವೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿಯಲ್ಲೇ ಇರುತ್ತದೆ. ನಮ್ಮ ನಡುವೆ ವೈಷಮ್ಯ ತಂದು ಹಾಕುವ ಯಾವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡಿ.ಕೆ ಶಿವಕುಮಾರ್ ಅವರ ಕೈ ಹಿಡಿದು ಮೇಲೆತ್ತಿ ನಾವು ಚೆನ್ನಾಗಿದ್ದೇವೆ ಎಂದು ಮಾಧ್ಯಮಕ್ಕೆ ತೋರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ನಮ್ಮ ಬಗ್ಗೆ ಮಾತನಾಡುವ ಶ್ರೀರಾಮುಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎನ್ನುವುದು ಮಾಧ್ಯಮದವರಿಗೆ ಅನ್ನಿಸಿದೆ ಅಲ್ಲವೇ ಅದೇ ಸತ್ಯ ಎಂದು ಅವರು ಹೇಳಿದರು.

ರಣದೀಪ್ ಸಿಂಗ್ ಸುರ್ಜೇವಾಲ ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನೂ ವಿಶೆಷ ಇಲ್ಲ ಎಂದು ಹೇಳಿದರು.
ಹಾಸನದಲ್ಲಿ ಹೃದಯಾಘಾತ ಹೆಚ್ಚಾಗಿರುವ ವಿಚಾರವಾಗಿ ಮಾತನಾಡಿದ ಅವರು, ಅದರ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಹೃದಯಾಧಾತ ಹೆಚ್ಚಾಗಲು ಕಾರಂ ಏನು ಎನ್ನುವುದಕ್ಕೆ ತಜ್ಞರ ಮೂಲಕ ಮಾಹಿತಿ ತರಿಸಿಕೊಳ್ಳುತ್ತೇನೆ. ಅದರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು.

ಮಹಾರಾಷ್ಟçದಲ್ಲಿ ದ್ವಿಭಾಷಾ ಶಿಕ್ಷಣಕ್ಕೆ ಅಸ್ತು ಅಂದಿರುವ ವಿಚಾರಕ್ಕೆ ಸಂಬoಧಿಸಿದoತೆ ಮಾತನಾಡಿದ ಅವರು, ನಾವು ದವಿಭಾಷಾ ಶಿಕ್ಷಣದ ಪರವಿದ್ದೇವೆ. ಮೊದಲಿನಿಂದಲೂ ನಮ್ಮದು ದ್ವಿಭಾಷಾ ಶಿಕ್ಷಣದ ವಾದವಿದೆ. ಈಗಲೂ ದ್ವಿಭಾಷಾ ಪ್ರದೇಶಗಳಲ್ಲಿ ಶಿಕ್ಷಣಕ್ಕೆ ನಾವು ಬದ್ಧರಿದ್ದೇವೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!