spot_img
Wednesday, March 18, 2026
spot_img

ಕುಂದಾಪುರ ಬ್ಲಾಕ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ಸಿನ ಪೂರ್ವಭಾವಿ ಸಭೆ

ಕುಂದಾಪುರ: ಜುಲೈ ೪ರಂದು ನಡೆಯಲಿರುವ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆ ಜೂ.೨೮ ರಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೆರವೇರಿತು.

ಸಭೆಯಲ್ಲಿ ಮಾಜಿ ಸಂಸದರು ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ಕುಂದಾಪುರ ವಿಧಾನಸಭೆಯ ಕಾಂಗ್ರೆಸ್ ನಾಯಕರಾದ ದಿನೇಶ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ನಿಯೋಜಿತ ಅಧ್ಯಕ್ಷರಿಗೆ ಶುಭಾಶಯಗಳನ್ನು ತಿಳಿಸಿ, ಮಹಿಳೆಯರು ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಗೀತಾ ವಾಗ್ಲೆಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಧಿಕಾರ ಸ್ವೀಕಾರ ಮಾಡಲಿರುವ ಶ್ರೀಮತಿ ಜ್ಯೋತಿ ಹೆಬ್ಬಾರ್ ಎಲ್ಲರನ್ನೂ ಜುಲೈ 4 ರಂದು ಉಡುಪಿ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ನಡೆಯುವ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಪುರಸಭಾ ಸದಸ್ಯರಾದ ಪ್ರಭಾವತಿ ಶೆಟ್ಟಿ, ತಾಲೂಕು ಕೆಡಿಪಿ ಸದಸ್ಯರಾದ ಜ್ಯೋತಿ ಪುತ್ರನ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಭೆಯಲ್ಲಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಚಂದ್ರಿಕಾ ಶೆಟ್ಟಿ, ಮಿನಾಕ್ಷಿ ಮಾದವ್, ಶಾಂತಿ ಪಿರೇರಾ, ಅನಿತಾ ಡಿಸೋಜ, ಸಂಧ್ಯಾ ತಿಲಕ್ ಹಾಗೂ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ವಾಣಿ ಆರ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ರೇವತಿ ಶೆಟ್ಟಿ, ಕುಂದಾಪುರ ದೇವಸ್ಥಾನ ಸಮಿತಿಯ ಸದಸ್ಯರಾದ ಗಿರಿಜಾ ಉದಯ್, ಪಂಚಾಯತ್ ಸದಸ್ಯರಾದ ಜಾನಕಿ ಬಿಲ್ಲವ, ಸವಿತಾ, ಜೆಸಿಂತಾ ಡಿಮೊಲ್ಲೊಹಾಗೂ ಪ್ರಭಾವತಿ ಶೆಟ್ಟಿ ಬೇಳೂರು, ಶಾಲೆಟ್ ರೆಬೆಲ್ಲೊ, ರಾಜೀವಿ, ಸುರೇಖಾ,, ಜಯ, ಮುತ್ತು, ಮೇಬಲ್ ಡಿಸೋಜ , ವೇಲಾ ಬ್ರಗಾಂಜ, ಮುಕಾಂಬಿಕಾ, ಶೋಭಾ, ಸುಶೀಲಾ, ಪುಷ್ಪಾ, ಲೀಲಾ, ಗಿರಿಜಾ ಶಂಕರ್ , ಲಲಿತಾ, ನಗರ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಕೆ. ವಿಜಯ್ ಪುತ್ರನ್ ಉಪಸ್ಥಿತರಿದ್ದರು.

ಕುಂದಾಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ದೇವಕಿ ಸಣ್ಣಯ್ಯರವರು ಸ್ವಾಗತಿಸಿದರು. ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಆಶಾ ಕರ್ವಾಲ್ಲೊ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!