spot_img
Wednesday, March 18, 2026
spot_img

ಭಾಗವತ ರಾಘವೇಂದ್ರ ಮಯ್ಯ ಅವರಿಗೆ ಕಲಾಕದಂಬ ಕಾಳಿಂಗ ನಾವಡ ಪ್ರಶಸ್ತಿ 2025

ಬೆಂಗಳೂರು: ಯಕ್ಷಗಾನ, ನಾಟಕವಲ್ಲದೆ ಹಲವಾರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಕಾಳಿಂಗ ನಾವಡರ ನೆನಪಿನಲ್ಲಿ ಪ್ರತಿ ವರ್ಷ ಯಕ್ಷಗಾನ ಕ್ಷೇತ್ರದಲ್ಲಿನ ಪ್ರತಿಭಾನ್ವಿತರೋರ್ವರಿಗೆ ಕಾಳಿಂಗ ನಾವಡ ಪ್ರಶಸ್ತಿಯನ್ನು ನೀಡುತ್ತಿದ್ದು, ಇಪ್ಪತ್ತೈದು ಸಾವಿರ ನಗದು, ಬೆಳ್ಳಿ ಸಾಮಾನು, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಈ ಒಂದು ಪ್ರಶಸ್ತಿಯು ಒಳಗೊಂಡಿದೆ.

ಈ ಬಾರಿಯ ೧೬ನೇ ವರ್ಷದ 2025ರ ಸಾಲಿನ ಕಾಳಿಂಗ ನಾವಡ ಪ್ರಶಸ್ತಿಯನ್ನು ಸತತ 42 ವರ್ಷಗಳಿಂದ ಯಕ್ಷಗಾನದ ಭಾಗವತರಾಗಿ ತಮ್ಮ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ ಮಯ್ಯರಿಗೆ ಇದೇ ಬರುವ ಅಕ್ಟೋಬರ್ ತಿಂಗಳ 12ನೇ ತಾರೀಖಿನಂದು ಸಂಜೆ ಬೆಂಗಳೂರಿನ ಬನಶಂಕರಿ 3ನೇ ವಿಭಾಗದಲ್ಲಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟುಲ್ಲಿರುವ ಪರಂಪರ ಆಡಿಟೋರಿಯಮ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!