spot_img
Monday, March 16, 2026
spot_img

ಜು.2ರಿಂದ ‘ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ’

ಕುಂದಾಪುರ: ರಾಜ್ಯ ಸರಕಾರದ ಬಗ್ಗೆ ಬಿಜೆಪಿಯ ಅಪಪ್ರಚಾರದ ವಿರುದ್ಧ ವಾಸ್ತವ ವಿಚಾರ ಮತ್ತು ಸತ್ಯವನ್ನು ಜನರ ಮುಂದಿಡಲು ದಿನಾಂಕ 2-7 – 2025ರಿಂದ 1 ವಾರಗಳ ಕಾಲ “ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ” ಕುಂದಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ( ಜಿಲ್ಲಾ ಪಂಚಾಯತ್‌ಗೆ 1 ಗ್ರಾಮ ಪಂಚಾಯಿತಿಯಂತೆ) ಪ್ರತಿ ದಿನ 3 ಗ್ರಾಮ ಪಂಚಾಯತ್ ಎದುರು ಬೆಳಿಗ್ಗೆ 10 ಘಂಟೆಗೆ ಪ್ರತಿಭಟನಾ ಕಾರ್ಯಕ್ರಮ ನಡೆಸಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ತಿಳಿಸಿದ್ದಾರೆ.

2 ವರ್ಷದ ಹಿಂದೆ ಬಿಜೆಪಿ ಸರಕಾರ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಜಾರಿಗೆ ತಂದಿರುವ 9/ 11 ಏಕ ನಿವೇಶನ, ಅಕ್ರಮ – ಸಕ್ರಮ ಯೋಜನೆಯಲ್ಲಿ 53 ಮತ್ತು 57 ರಲ್ಲಿ ಅರ್ಜಿ ತಿರಸ್ಕರಿಸಲು ಮತ್ತು ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳನ್ನು ಮರು ಸಮೀಕ್ಷೆ ಕುರಿತು ಹಾಗೂ ವಿದ್ಯುತ್ ದರ ಎರಿಕೆಯಂತಹ ಸುತ್ತೋಲೆ ಮತ್ತು ಆದೇಶ ಹೊರಡಿಸಿತ್ತು.

ಈಗ ಕರ್ನಾಟಕದ ಕಾಂಗ್ರೆಸ್ ಸರಕಾರ ಇದನ್ನೆಲ್ಲಾ ಮಾಡಿರುತ್ತದೆ ಎಂದು ಸುಳ್ಳು ಮತ್ತು ಅಪಪ್ರಚಾರ ಮಾಡಿ ಮುಂದೆ ಬರುವ ಗ್ರಾಮ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಮತದಾರರ ಅನುಕಂಪ ಪಡೆಯಲು ಜೂನ್ 23 ರಂದು ಬಿಜೆಪಿ ಪ್ರತಿ ಗ್ರಾಮ ಪಂಚಾಯತ ಎದುರು ಪ್ರತಿಭಟನೆ ನೆಡೆಸಿತ್ತು.

ಜನರಿಗೆ ಸತ್ಯಾಂಶವನ್ನು ಮನವರಿಕೆ ಮಾಡಿಕೊಡುವ ಸಲುವಾಗಿ ಕಾಂಗ್ರೆಸ್ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!