spot_img
Friday, January 30, 2026
spot_img

ಪ್ರಸ್ತುತ ಪತ್ರಿಕೋದ್ಯಮದಲ್ಲಿ ವಿಫುಲ ಅವಕಾಶ-ಡಾ.ಸುಧಾಕರ ನಂಬಿಯಾರ್ | ಕುಂದಾಪುರದಲ್ಲಿ ಪತ್ರಿಕಾ ದಿನಾಚರಣೆ

ಕುಂದಾಪುರ, ಜು.1: ಪತ್ರಿಕೊದ್ಯಮ ಸಾಕಷ್ಟು ಬದಲಾವಣೆ, ಪ್ರಗತಿ ಸಾಧಿಸಿದೆ. ಹಿಂದೆ ಪತ್ರಕರ್ತನ ಮುಂದೆ ಸಾಕಷ್ಟು ಸವಾಲುಗಳಿದ್ದವು. ಇವತ್ತು ಆಧುನಿಕ ಜಗತ್ತು ಅವಕಾಶ, ಸೌಲಭ್ಯಗಳನ್ನು ಒದಗಿಸಿದೆ. ಪತ್ರಿಕೋದ್ಯಮ ಇವತ್ತು ವಿಫುಲವಾಗಿ ಬೆಳೆದಿದೆ. ಪತ್ರಿಕೋದ್ಯಮ ವ್ಯಾಸಂಗ ಮಾಡಿದರೆ ಬೇರೆ ಬೇರೆ ಅವಕಾಶಗಳು ಸೃಷ್ಟಿಯಾಗಿವೆ. ಇಂಜಿನಿಯರಿಂಗ್, ವೈದ್ಯಕೀಯ ಕ್ಷೇತ್ರ ಮಾತ್ರ ವಿದ್ಯಾರ್ಥಿಗಳ ಆದ್ಯತೆಯಾಗಿರದೆ ಪತ್ರಿಕೋದ್ಯಮವನ್ನು ಆರಿಸಿಕೊಂಡರೆ ಉತ್ತಮ ಭವಿಷ್ಯವಿದೆ. ಪರಿವರ್ತಿತ ಪತ್ರಿಕೋದ್ಯಮ ಸಾಕಷ್ಟು ಅವಕಾಶಗಳನ್ನು ಸೃಷ್ಟಿಸಿಕೊಂಡಿದೆ ಎಂದು ಹಿರಿಯ ಪತ್ರಕರ್ತ ಡಾ.ಸುಧಾಕರ ನಂಬಿಯಾರ್ ಹೇಳಿದರು.

ಕುಂದಾಪುರ ಭಂಡಾರ್‌ಕಾರ್‍ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು, ಕಾರ್ಯನಿರತ ಪತ್ರಕರ್ತರ ಸಂಘ, ಕುಂದಾಪುರ ಇವರ ಸಹಯೋಗದೊಂದಿಗೆ ಭಂಡಾರ್‌ಕಾರ್‍ಸ್ ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ‘ಪರಿವರ್ತಿತ ಪತ್ರಿಕೋದ್ಯಮ’ದ ಕುರಿತು ಉಪನ್ಯಾಸ ನೀಡಿದರು.

ಪತ್ರಿಕೋದ್ಯಮದಲ್ಲಿ ಓದುಗರ ಆಕರ್ಷಿಸುವ ಅಪಾರವಾದ ಅನುಭವ ಪತ್ರಕರ್ತರಲ್ಲಿ ಇರಬೇಕಾಗುತ್ತದೆ. ನಿರಂತರ ಕಲಿಕೆ, ಹಿರಿಯರ ಅನುಭವ ಪಡೆಯುವ ಮೂಲಕ ಅದನ್ನು ಸಿದ್ಧಿಸಿಕೊಳ್ಳಲು ಸಾಧ್ಯವಿದೆ. ವಿಷಯವೊಂದನ್ನು ಓದುಗರ ಮುಂದಿಡುವಲ್ಲಿ ಪತ್ರಕರ್ತನ ಬರಹದ ಕೌಶಲ್ಯವೂ ಅಡಗಿರುತ್ತದೆ. ನನ್ನ 30 ವರ್ಷಗಳ ಪತ್ರಿಕೋದ್ಯಮದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾಕಾರ್ ಕಾರ್‍ಸ್ ಕಾಲೇಜು ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ.ಶಾಂತರಾಮ ಪ್ರಭು ವಹಿಸಿದ್ದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ, ವೈದ್ಯರೂ ಆಗಿರುವ ಡಾ. ಸುಧಾಕರ ನಂಬಿಯಾರ್ ಕೋಟೇಶ್ವರ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ, ಆಂತರಿಕ ಗುಣಮಟ್ಟ ಭರವಸೆ ಕೋಶ ಇದರ ಸಂಯೋಜಕರಾದ ಪ್ರೊ.ಸತ್ಯನಾರಾಯಣ ಉಪಸ್ಥಿತರಿದ್ದರು.

ರೇಡಿಯೋ ಕುಂದಾಪ್ರ 89.6 ಎಫ್.ಎಂ ಇದರಲ್ಲಿ ನಿರ್ವಹಣೆ, ಪ್ರಸಾರ ಹಾಗೂ ತಾಂತ್ರಿಕವಾಗಿ ಸಹಕರಿಸುತ್ತಿರುವ ನಿರಂಜನ್ ಎಚ್.ಬಿ ಅವರಿಗೆ ಪ್ರಮಾಣಪತ್ರ ನೀಡಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಾಕರಾಚಾರಿ ಸ್ವಾಗತಿಸಿದರು. ಕರ್ನಾಟಕ ಮಾದ್ಯಮ ಅಕಾಡೆಮಿ ಸದಸ್ಯರಾದ ಯು.ಎಸ್ ಶೆಣೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಮಲತಾ ನಾಯ್ಕ್ ಸನ್ಮಾನಿತರ ಪರಿಚಯಿಸಿದರು. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ ಬೀಜಾಡಿ ವಂದಿಸಿದರು. ರೇಡಿಯೋ ಕುಂದಾಪ್ರ 89.6 ಎಫ್.ಎಂ ಕಾರ್ಯಕ್ರಮ ನಿರ್ವಹಕರಾದ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!