spot_img
Monday, March 16, 2026
spot_img

“ಮಾದಕ ದ್ರವ್ಯ ವ್ಯಸನ ಯುವಜನತೆಯನ್ನು ಕಾಡುತ್ತಿರುವ ದೊಡ್ಡ ಪಿಡುಗು”-ಶಂಭುಲಿಂಗಯ್ಯ

ಶಂಕರನಾರಾಯಣ: ಮಾದಕ ದ್ರವ್ಯ ಸೇವನೆ ವ್ಯಕ್ತಿಯ ಆರೋಗ್ಯ ಮತ್ತು ಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡವರಿಗೆ ಕಾನೂನಿನ ಅನ್ವಯ ವಿವಿಧ ಶಿಕ್ಷೆಗಳನ್ನು ನೀಡಲಾಗುತ್ತದೆ. ಮಾದಕ ದ್ರವ್ಯ ವ್ಯಸನವನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಸಾಮಾಜಿಕ ಜವಾಬ್ದಾರಿಯನ್ನು ಬಹಳ ದೊಡ್ಡದು ಎಂದು ಶಂಕರನಾರಾಯಣ ಪೋಲಿಸ್ ಠಾಣೆಯ ಠಾಣಾಧಿಕಾರಿ ಶಂಭುಲಿಂಗಯ್ಯ ಎಮ್.ಇ. ಹೇಳಿದರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದಲ್ಲಿ ಆಂತರಿಕ ಗುಣಮಟ್ಟ ಭರವಸಾಕೋಶ, ಮಾದಕ ದ್ರವ್ಯ ನಿರ್ಮೂಲನಾ ಸಮಿತಿ ಮತ್ತು ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಮಾತನಾಡಿ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಐಕ್ಯೂ‌ಎಸಿ ಸಂಚಾಲಕ ಡಾ.ವಸಂತ್ ಜಿ, ಉಪಸ್ಥಿತರಿದ್ದರು, ಸ್ನಾತಕೋತ್ತರ ವಿಭಾಗದ ಸಂಯೋಜಕಿ ಪ್ರಜ್ಞಾ ಕಾರ್ಯಕ್ರಮ ನಡೆಸಿಕೊಟ್ಟರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!