spot_img
Monday, March 16, 2026
spot_img

ಕಾರಂತರ ಪರಿಚಯದಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ-ಡಾ. ಗಣನಾಥ ಎಕ್ಕಾರು

ಮರವಂತೆ: ಡಾ. ಕೋಟ ಶಿವರಾಮ ಕಾರಂತರದು ಸಾಹಿತ್ಯ ರಚನೆಯ ಜತೆಗೆ ಬಹುಮುಖ ಸಾಧನೆ. ವಿದ್ಯಾರ್ಥಿಗಳು ಅವುಗಳ ಪರಿಚಯ ಮಾಡಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಾಸ ಸಾಧ್ಯವಾಗುತ್ತದೆ ಎಂದು ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಹೇಳಿದರು.

ಕಾರಂತ ಟ್ರಸ್ಟ್ ಮರವಂತೆಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಶಾಲೆಯ ಐ. ವಸಂತಕುಮಾರಿ ಕಲಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಕ್ಕಳಿಗಾಗಿ ಕಾರಂತರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರಂತರು ಮಕ್ಕಳ ಶಿಕ್ಷಣ ಮತ್ತು ಬೆಳವಣಿಗೆಯ ಬಗ್ಗೆ ವಿಶೇಷ ಕಾಳಜಿ ಹೊಂದಿರುವುದಕ್ಕೆ ಅವರು ಪುತ್ತೂರಿನಲ್ಲಿ ಆರಂಭಿಸಿದ್ದ ಬಾಲವನ, ಅವರು ಬರೆದ ಬಾಲಪ್ರಪಂಚ ಉದಾಹರಣೆ. ಮಕ್ಕಳೊಡನೆ ಸಂವಹನ ನಡೆಸಿ ಅವರ ಕುತೂಹಲ ತಣಿಸುವುದು ಅವರ ಅಚ್ಚುಮೆಚ್ಚಿನ ಹವ್ಯಾಸವಾಗಿತ್ತು. ಶಿವರಾಮ ಕಾರಂತ ಟ್ರಸ್ಟ್ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾರಂತರನ್ನು ಪರಿಚಯಿಸುವ ಕಾರ್ಯದಲ್ಲಿ ಈಗ ನಿರತವಾಗಿದೆ ಎಂದು ಅವರು ಹೇಳಿದರು.

ಶಾಲಾ ಸಂಸ್ಥಾಪನಾ ಸಮಿತಿ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಟ್ರಸ್ಟ್‌ನ ಕಾರ್ಯದರ್ಶಿ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಟ್ರಸ್ಟ್ ಸದಸ್ಯ ಸಂಚಾಲಕ ಡಾ. ಚೇತನ್ ಶೆಟ್ಟಿ ಕೊವಾಡಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಇನ್ನೋರ್ವ ಸಂಚಾಲಕ ಸದಸ್ಯೆ, ಖ್ಯಾತ ರಂಗೋಲಿ ಕಲಾವಿದೆ ಡಾ. ಭಾರತಿ ಮರವಂತೆ ವಿದ್ಯಾರ್ಥಿಗಳಿಗೆ ಕಾರಂತರ ಪುಸ್ತಕಗಳಲ್ಲಿ ಬಳಕೆಯಾದ ರೇಖಾಚಿತ್ರಗಳ ರಂಗೋಲಿ ಬಿಡಿಸಲು ಮಾರ್ಗದರ್ಶನ ನೀಡುವ ಮೂಲಕ ಕಾರಂತರನ್ನು ಪರಿಚಯಿಸಿದರು. ಮುಖ್ಯೋಪಾಧ್ಯಾಯ ಎಂ. ಭಾಸ್ಕರ ಮಯ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಜಾತಾ, ಶಾಲಾ ರಜತೋತ್ಸವ ಸಮಿತಿ ಅಧ್ಯಕ್ಷ ದಯಾನಂದ ಬಳೆಗಾರ್ ಮುಖ್ಯ ಅತಿಥಿಗಳಾಗಿದ್ದರು.

ಶಿಕ್ಷಕ ಹಿತೇಶ ಶೆಟ್ಟಿ ವಂದಿಸಿದರು. ರಮೇಶ ನಾಯ್ಕ್ ಉಪ್ಪುಂದ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!