spot_img
Tuesday, March 17, 2026
spot_img

ಗಂಗೊಳ್ಳಿಯ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್: ಜಿ.ದಯಾನಂದ ಗಾಣಿಗ ಅವರಿಗೆ ಬೀಳ್ಕೋಡುಗೆ

ಗಂಗೊಳ್ಳಿ : ಗಂಗೊಳ್ಳಿಯ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಕಳೆದ ೧೯ ವರ್ಷಗಳಿಂದ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಜಿ.ದಯಾನಂದ ಗಾಣಿಗ ಅವರನ್ನು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ವತಿಯಿಂದ ಸೋಮವಾರ ಬೀಳ್ಕೊಡಲಾಯಿತು.

ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಅವರು ದಯಾನಂದ ಗಾಣಿಗ ಅವರ ಸೇವೆಯನ್ನು ಶ್ಲಾಘಿಸಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಉಪಾಧ್ಯಕ್ಷ ವಾಸುದೇವ ಶೇರುಗಾರ್, ನಿರ್ದೇಶಕರಾದ ಹರೀಶ ಮೇಸ್ತ, ಗೋಪಾಲ ನಾಯ್ಕ್, ನಾಗರಾಜ ಎಂ., ಲಕ್ಷ್ಮಣ, ಯಮುನಾ, ಪ್ರೇಮಾ ಪೂಜಾರಿ, ಚಂದ್ರಮತಿ ಹೆಗ್ಡೆ, ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜಗೋಪಾಲ ಪೂಜಾರಿ, ಆಶಾಲತಾ ಡಿ.ಗಾಣಿಗ, ಪತ್ರಕರ್ತ ಬಿ.ರಾಘವೇಂದ್ರ ಪೈ, ನಿವೃತ್ತ ವ್ಯವಸ್ಥಾಪಕ ಮುತ್ತ ಕುಂದರ್, ಬ್ಯಾಂಕಿನ ಮಾಜಿ ನಿರ್ದೇಶಕರು, ಬ್ಯಾಂಕಿನ ವಿವಿಧ ಶಾಖೆಗಳ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜಗೋಪಾಲ ಪೂಜಾರಿ ಸ್ವಾಗತಿಸಿದರು. ಬ್ಯಾಂಕಿನ ಸಿಬ್ಬಂದಿ ಜಗದೀಶ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!