spot_img
Tuesday, March 17, 2026
spot_img

ಹಟ್ಟಿ‌ಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ರಾಷ್ಟ್ರೀಯ ಮಟ್ಟದ ‘ಬೆಸ್ಟ್ ಡೇ ಕಮ್ ಬೋರ್ಡಿಂಗ್ ಸ್ಕೂಲ್ ಅವಾರ್ಡ್’

ಕುಂದಾಪುರ: ಹಟ್ಟಿ‌ಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ವಿದ್ಯಾರ್ಥಿಗಳಿಗೆ ಶ್ರೇಷ್ಠ ವಿದ್ಯಾದಾನದ ಮೂಲಕ ಸಾಧನೆಗೈಯ್ಯುತ್ತಾ ಇಂದು ವಿಶ್ವಮಟ್ಟದಲ್ಲಿ ಖ್ಯಾತಿಯನ್ನು ಪಡೆದುಕೊಂಡಿದೆ. ನ್ಯಾಷನಲ್ ಸ್ಕೂಲ್ ಅವಾರ್ಡ್ 2025 ರಲ್ಲಿ ರಾಷ್ಟ್ರೀಯ ಮಟ್ಟದ ಬೆಸ್ಟ್ ಡೇ ಕಮ್ ಬೋರ್ಡಿಂಗ್ ಸ್ಕೂಲ್ ಅವಾರ್ಡ್ ಮತ್ತು ಬೆಸ್ಟ್ ಪ್ರಿನ್ಸಿಪಾಲ್ ಪ್ರಮೋಟ್ಸ್ ಪ್ರೋಗ್ರೇಸ್ಸಿವ್ ಲರ್ನಿಂಗ್ – 2025ಅವಾರ್ಡ್ ಎಂಬ ರಾಷ್ಟ್ರೀಯ ಮಟ್ಟದ ಗೌರವ ಪುರಸ್ಕಾರಕ್ಕೆ ಭಾಜನವಾಯಿತು.

ಜೂನ್ 30ರಂದು ಬೆಂಗಳೂರಿನ ಹೆಬ್ಬಾಳದ ಕೋರ್ಟ್ಯಾಟ್ ಮ್ಯಾರಿಯೋಟ್ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಡಾ. ರಾಜ್ ಕತ್ರೀ ನಿವೃತ್ತ ಐ‌ಎ‌ಎಸ್ ಅಧಿಕಾರಿ ಮತ್ತು ಶಿಖಾ ದಿಲನ್ ಎಕ್ಸಿಕ್ಯೂಟಿವ್ ನಿರ್ದೇಶಕರು, ಅವರಿಂದ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪರವಾಗಿ ಸಂಯೋಜಕರಾದ ಶ್ರೀಮತಿ ಲತಾ ದೇವಾಡಿಗ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಕಾರ್ಯಕ್ರಮದಲ್ಲಿ ಡಾ. ಸೌಮ್ಯ ನಾರಾಯಣನ್, ಅಧ್ಯಕ್ಷರು ಐ‌ಐಟಿ ಬೆಂಗಳೂರು, ಡಾ. ಎಮ್ ಎಸ್ ಪ್ರಕಾಶ್, ಟ್ರೇಡ್ ಕಮಿಷನರ್, ಟ್ರಸ್ಟಿಗಳು, ರಾಷ್ಟ್ರೀಯ ಶಿಕ್ಷಣ ಸಮಿತಿ, ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಹರ್ಷವನ್ನು ವ್ಯಕ್ತಪಡಿಸುತ್ತಾ ಸಮಾಜ ನಮ್ಮನ್ನು ಗುರುತಿಸುತ್ತಿದ್ದು, ನಾವು ಕಾರ್ಯಗಳನ್ನು ಇನ್ನಷ್ಟು ಸುಧಾರಿಸಿಕೊಂಡು ಮುನ್ನಡೆಯಬೇಕಿದೆ. ಶಾಲೆಯ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ನಮ್ಮ ಗುರಿಯಾಗಿರಬೇಕು. ಎಂದು ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರನ್ನು ಹುರಿದುಂಬಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!