spot_img
Wednesday, April 1, 2026
spot_img

ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಬೈಂದೂರು: ಬೈಂದೂರು ತಾಲೂಕು ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆಯಲಿ 2025-26ನೇ ಸಾಲಿನ ಶಾಲಾ ಸಂಸತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಜೂ.30ರಂದು ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರತ್ನ ಶಾಲಾ ಸಂಸತ್ತು ಮತ್ತು ನೂತನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ವಿದ್ಯೆಯನ್ನು ಕಲಿಯುವುದರ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಸ್ವಚ್ಛತೆಯತ್ತ ಹೆಚ್ಚು ಗಮನವಹಿಸಿ, ಸಂಸ್ಕಾರವಂತರಾಗಿ ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಮಂತ್ರಿಮಂಡಲ ಕಾರ್ಯಕಲಾಪದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಧೀರಜ್ ಬಿ ನೂತನವಾಗಿ ಚುನಾಯಿತರಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಶುಭ ಕೋರಿದರು.

ಪ್ರಾಂಶುಪಾಲರಾದ ಡಾ.ರವಿದಾಸ್ ಶೆಟ್ಟಿ ಚುನಾಯಿತ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಭೆಯಲ್ಲಿ ವಿವಿಧ ಸಂಘಗಳ ಮಾರ್ಗದರ್ಶಕರು ವಿದ್ಯಾರ್ಥಿಗಳು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಅಕ್ಷತಾ ನಾಯ್ಕ್ ಸ್ವಾಗತಿಸಿ, ಸಿಜಿ ವಿ ಪಿ ವಂದಿಸಿದರು ಹಾಗೂ ಆಶಾ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!