spot_img
Wednesday, April 1, 2026
spot_img

ಕುಂದಾಪುರ ಸರಕಾರಿ ಪ.ಪೂ ಕಾಲೇಜು: ವೇದಿಕೆಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

ಕುಂದಾಪುರ: ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ೨೦೨೫-೨೬ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಇತ್ತೀಚೆಗೆ ನಡೆಯಿತು.

ಸರ್ಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ ಇಲ್ಲಿನ ಪ್ರಾಂಶುಪಾಲರಾದ ಸುಶೀಲಾ ಹೊಳ್ಳ ದೀಪ ಬೆಳಗಿಸಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ತಮ್ಮಲ್ಲಿ ಇರುವ ಸುಪ್ತ ಪ್ರತಿಭೆಗಳನ್ನು ಬೆಳಕಿಗೆ ತರಲು ಕಾಲೇಜಿನಲ್ಲಿ ಸ್ಥಾಪಿಸಿದ ವೇದಿಕೆಗಳ ಉಪಯೋಗ ಪಡೆಯಲು ಸೂಚಿಸಿದರು.

ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಪಾಸಾದ ೮೮ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರವನ್ನು ನೀಡಲಾಯಿತು. ಕುಂದಾಪುರ ಪುರಸಭೆ ಅಧ್ಯಕ್ಷರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಆದ ಮೋಹನದಾಸ ಶೆಣೈ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ ಜಿ ಅಧ್ಯಕ್ಷತೆ ವಹಿಸಿದ್ದರು. ವನಿತಾ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೊತ್ಸ್ನಾ ಪೈ ಇವರು ಪ್ರತಿಭಾ ಪುರಸ್ಕತರ ಪಟ್ಟಿ ವಾಚಿಸಿದರು. ಹಿರಿಯ ಉಪನ್ಯಾಸಕರಾದ ಚಂದ್ರಶೇಖರ ಸ್ವಾಗತಿಸಿದರು. ಕೇಶವ ಪಿ ಕಾರ್ಯಕ್ರಮ ನಿರ್ವಹಿಸಿದರು. ಗೀತಾ ಕುಂದರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!