spot_img
Wednesday, April 1, 2026
spot_img

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್: ವಿದ್ಯಾರಣ್ಯದ ವಿದ್ಯಾರ್ಥಿಗಳು ಚಿತ್ರಕಲೆ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ

ಕುಂದಾಪುರ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿಜಯ ಕರ್ನಾಟಕ ದಿನಪತ್ರಿಕೆಯು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೊಂದಿಗೆ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯ ಕರ್ನಾಟಕ ದಿನಪತ್ರಿಕೆ ಆಯೋಜಿಸಿದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಮನ್ವಿತ್ ಬಿ 10ನೇ ತರಗತಿ, ಅಭಿಕ್ಷಾ 10ನೇ ತರಗತಿ, ಶರಧಿ ಎಸ್ ೯ನೇ ತರಗತಿ ಹಾಗೂ ಚಿತ್ರಾ ಜಿ ಪೂಜಾರಿ 7ನೇ ತರಗತಿ ಅತ್ಯುತ್ತಮ ನಿರ್ವಹಣೆಯಿಂದ,ಜುಲೈ 6ರಂದು ಭಾನುವಾರ ಉಡುಪಿ ಅಂಬಲಪಾಡಿ ಫ್ಯಾಮಿಲಿ ಸಭಾಭವನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ನಿರಂತರವಾಗಿ ನಡೆಯುವ ತರಬೇತಿ ಕಾರ್ಯಕ್ರಮಗಳು ಮತ್ತು ಪ್ರತಿ ಎರಡು ವಾರಗಳಿಗೊಮ್ಮೆ ನಡೆಯುವ ಪಠ್ಯೇತರ ಚಟುವಟಿಕೆಗಳು ಮಕ್ಕಳ ಈ ಅಮೋಘ ಸಾಧನೆಗೆ ಸಹಕಾರಿಯಾಗಿದೆ.

ಮಕ್ಕಳ ಈ ಗಮನೀಯ ಸಾಧನೆಯನ್ನು ಶ್ಲಾಘಿಸಿ ಸಂಸ್ಥೆಯ ಆಡಳಿತ ಮಂಡಳಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್ ಕೆ., ಶಿಕ್ಷಕ-ಶಿಕ್ಷಕೇತರ ವರ್ಗದವರು ಅಭಿನಂದನೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!