spot_img
Wednesday, April 1, 2026
spot_img

ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರು: ಸಹಪಠ್ಯ ಸಂಘಗಳ ಉದ್ಘಾಟನೆ

ಕುಂದಾಪುರ: ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರು ಇಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಯ ನಿರ್ವಹಿಸಲಿರುವ ಶಾಲಾ ವಿದ್ಯಾರ್ಥಿಗಳ ಸರಕಾರ, ಕ್ರೀಡಾ ಸಂಘ, ಸಾಂಸ್ಕೃತಿಕ ಸಂಘ, ಭಾಷಾ ಸಂಘ, ಚಿತ್ರಕಲಾ ಸಂಘ, ಕೃಷಿ ಸಂಘ, ಗಣಿತ ಕ್ಲಬ್ ಹಾಗೂ ವಿಜ್ಞಾನ ಕ್ಲಬ್ ಇವುಗಳನ್ನು ಸಾಹಿತಿ, ಚಿಂತಕ ಮುಷ್ತಾಕ್ ಹೆನ್ನಾಬೈಲು ಉದ್ಘಾಟಿಸಿದರು.

ಎಳವೆಯಲ್ಲಿಯೇ ವಿದ್ಯಾರ್ಥಿಗಳು ಉತ್ತಮ ರಾಜಕೀಯ ಪ್ರಜ್ಞೆ-ಪರಿಸರ ಸಂರಕ್ಷಣೆಯ ಪ್ರಜ್ಞೆ ಹೊಂದಿರಬೇಕು. ಮಾತೃ ಭಾಷೆಯನ್ನು ಚೆನ್ನಾಗಿ ಅಧ್ಯಯನ ಮಾಡಬೇಕು. ತಂದೆ ತಾಯಿಯನ್ನು ಭಾರತೀಯ ಸಂಸ್ಕೃತಿಯ ನೆಲೆಯಲ್ಲಿ ಗೌರವಿಸಬೇಕು. ಆಂಗ್ಲ ಭಾಷೆಯ ಮೋಹವನ್ನು ತೊರೆದು ಕನ್ನಡ ಭಾಷೆಯ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಸರಕಾರಕ್ಕೆ ಪ್ರಮಾಣವಚನ ಬೋಧಿಸಿದರು. ವಿಜೇತ ಪ್ರಮಾಣ ಪತ್ರಗಳನ್ನು ವಿತರಿಸಿದರು. ಟ್ಯಾಲೆಂಟ್ ಶೋನಲ್ಲಿ ಭಾಗವಹಿಸಿ ಉತ್ತಮ ನಿರ್ವಹಣೆ ತೋರಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಿದರು.

ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಗೋಪಾಲ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿದರು. ಚಿತ್ರಕಲಾ ಶಿಕ್ಷಕರಾದ ಸುಂದರ್ ತೋಡಾರ್ ವಂದಿಸಿದರು. ಎಲ್ಲಾ ಶಿಕ್ಷಕ ವೃಂದದವರು ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!