spot_img
Sunday, February 15, 2026
spot_img

ಮಣಿಪಾಲ ಜ್ಞಾನಸುಧಾ : ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಮಣಿಪಾಲ: ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವವಿಭಾಗ) ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜು ವಿದ್ಯಾ ನಗರದಲ್ಲಿ ಉಡುಪಿ ಜಿಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಆಯೋಜಿಸಿದ ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ನಡೆಯಿತು.

ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವವಿಭಾಗ)ಯ ಉಪನಿರ್ದೇಶಕರಾದ ಮಾರುತಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿಯ ಭೌತಶಾಸ್ತ್ರದ ಸ್ನಾತಕೋತ್ತರ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥರಾದಡಾ.ರಾಘವೇಂದ್ರ‌ಎಸ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾಗಿ ಇಲ್ಲಿಯವರೆಗೆ ಸೇವೆ ಸಲ್ಲಿಸಿದ ಗಣಪತಿ ಅವಭೃತ ಹಾಗೂ ಇತ್ತೀಚೆಗಷ್ಟೆ ನಿಟ್ಟೆ ಎನ್.ಎಸ್.ಎ.ಎಮ್. ಪ.ಪೂ. ಕಾಲೇಜಿನ ಪ್ರಾಂಶುಪಾಲರಾಗಿ ಹಾಗೂ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ.ಪ್ರಕಾಶ್ ಶೆಣೈ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಕಾರ್ಯದರ್ಶಿ ಉಮಾಪತಿ ಸ್ವಾಗತಿಸಿ, ಖಜಾಂಚಿ ಸದಾನಂದ ಕುಲಾಲ್ ವಂದಿಸಿದರು. ಮಣಿಪಾಲ ಜ್ಞಾನಸುಧಾ ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!