spot_img
Thursday, April 2, 2026
spot_img

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ: ಅಂತರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆ

ಮೂಡ್ಲಕಟ್ಟೆ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನಾಚರಣೆಯನ್ನು ದಿನಾಂಕ ೩ ಜುಲೈ ೨೦೨೫ ರಂದು ಆಚರಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬ್ಯಾಗಗಳ ಬಳಕೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಅದರಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳನ್ನು ಜನರಿಗೆ ತಿಳಿಸಿ ಆದಷ್ಟು ಬಟ್ಟೆ ಬ್ಯಾಗ್‌ಗಳನ್ನು ಉಪಯೋಗಿಸಿ ಪರಿಸರದ ಮೇಲಾಗುವ ಹಾನಿಯನ್ನು ಕಡಿಮೆ ಮಾಡಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ ಎಲ್ಲರೂ ಕೈಜೋಡಿಸಬೇಕೆನ್ನುವ ಉದ್ದೇಶದಿಂದ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಉಚಿತವಾಗಿ ಬಟ್ಟೆಯಿಂದ ತಯಾರಿಸಿದ ಬ್ಯಾಗ್ ಗಳನ್ನು ವಿತರಿಸಿ ಜನ ಜಾಗೃತಿಯನ್ನು ಮೂಡಿಸಿದರು.

ಈ ಕಾರ್ಯಕ್ರಮದ ಉಸ್ತುವಾರಿಯನ್ನು ಪ್ರೊಫೆಸರ್ ನಾಗವೇಣಿ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಎಂ.ಬಿ.ಎ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಮತ್ತು ಇತರ ಉಪನ್ಯಾಸಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!