spot_img
Monday, February 16, 2026
spot_img

ಸತ್ಯವನ್ನು ಸುಳ್ಳು ಮಾಡುವುದೇ ಬಿಜೆಪಿಗರ ಜಾಯಾಮಾನ- ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ

ಸಿದ್ದಾಪುರ: ಬಿಜೆಪಿ ಪಕ್ಷದವರು ಅನ್ಯಾಯ ಮಾಡಿ, ಅದನ್ನು ಕಾಂಗ್ರೆಸ್ ಪಕ್ಷದ ಮೇಲೆ ಹಾಕುವುದೇ ಅವರ ಕೆಲಸವಾಗಿದೆ. ಇದನ್ನು ಸಮರ್ಥಿಸುವಲ್ಲಿ ಪ್ರತಿಭಟನೆ ಮಾಡುತ್ತಾರೆ. ಸುಳ್ಳನ್ನು ಸತ್ಯ ಮಾಡುವುದು. ಸತ್ಯವನ್ನು ಸುಳ್ಳು ಮಾಡುದೇ ಕರ್ತವ್ಯ ಮಾಡಿಕೊಂಡಿದ್ದಾರೆ. ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯದರ್ಶನ ಮಾಡುದೇ ಈ ಕಾರ್ಯಕ್ರಮದ ಉದ್ದೇಶ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಹೇಳಿದರು.

ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿವತಿಯಿಂದ ಶನಿವಾರ ಹಾಲಾಡಿ ಗ್ರಾ.ಪಂ. ಎದುರು ನಡೆದ ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆಯ ಸಪ್ತಾಹದಲ್ಲಿ ಮಾತನಾಡಿದರು.

ಸಾರ್ವಜನಿಕರನ್ನು ಕಾಡುತ್ತಿರುವ ೯/೧೧ ಸಮಸ್ಯೆ, ಅಕ್ರಮ ಸಕ್ರಮ ೫೩ ಮತ್ತು ೫೭ ಅರ್ಜಿ ತಿರಸ್ಕಾರ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆಯ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಕಾಂಗ್ರೆಸ್ ಪ್ರತಿಭಟನಾ ಕಾರ್ಯಕ್ರಮವಾಗಿದೆ. ಕಾಂಗ್ರೆಸ್ ನಿಲುವಿನಿಂದ ಸಾರ್ವಜನಿಕರಿಗೆ ತೊಂದರೆ ಎಂದು ಬಿಜೆಪಿ ಮಾಡಿದ ಅಪಪ್ರಚಾರ ಜನರಿಗೆ ಅರ್ಥ ಮಾಡಿಸಿ ಪಕ್ಷದ ಸಾಧನೆ ಬಿಂಬಿಸುವ ಯತ್ನ ಕಾರ್ಯಕರ್ತರು ಮಾಡಬೇಕು ಎಂದರು. ಬಿಜೆಪಿಯವರು ಕಾಂಗ್ರೆಸ್‌ನ ಎಲ್ಲ ಪಂಚ ಗ್ಯಾರಂಟಿಗಳನ್ನು ಅನುಭವಿಸುತ್ತಾ ಇದ್ದಾರೆ. ಜತೆಯಲ್ಲಿ ಹಿಂದೆ ಕಾಂಗ್ರೆಸ್ ಪಕ್ಷದ ಎಲ್ಲ ಸವಲತ್ತುಗಳನ್ನು ಅನುಭವಿಸಿಕೊಂಡು ಮಾತನಾಡುತ್ತಿದ್ದಾರೆ. ಮುಂದೆ ಬರುವ ಜಿ.ಪಂ. ಹಾಗೂ ತಾ.ಪಂ. ಚುನಾವಣೆಯ ಚಿಂತನೆ ಇಟ್ಟುಕೊಂಡು ಬಿಜೆಪಿಯ ಪ್ರತಿಭಟನೆಯ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಹಾಲಾಡಿ ಗ್ರಾ.ಪಂ. ಅಧ್ಯಕ್ಷ ಚೋರಾಡಿ ಅಶೋಕ ಶೆಟ್ಟಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಕ್ಷಿತ್ ಶೆಟ್ಟಿ, ಕುಂದಾಪುರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಪಕ್ಷದ ಹಿರಿಯರಾದ ಪದ್ಮನಾಭ ಚಾತ್ರ, ಸುರೇಶ ಶೆಟ್ಟಿ ಹೈಕಾಡಿ, ನರಸಿಂಹ ನಾಯ್ಕ, ಅಣ್ಣಪ್ಪ ಕುಲಾಲ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಅಶೋಕ ಶೆಟ್ಟಿ ಸ್ವಾಗತಿಸಿದರು. ಸೂರ್ಯಪ್ರಕಾಶ ದಾಮ್ಲೆ ಪ್ರಾಸ್ತವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!