spot_img
Thursday, April 2, 2026
spot_img

ವಿದ್ಯಾರ್ಥಿ ನಿಲಯಗಳಲ್ಲಿ ಅಶಿಸ್ತಿಗೆ ಅವಕಾಶ ನೀಡಬಾರದು- ಶಾಸಕ ಗಂಟಿಹೊಳೆ ಸೂಚನೆ

ಕುಂದಾಪುರ: ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಅತ್ಯುನ್ನತ ಸೌಕರ್ಯದೊಂದಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಿಸಲಾಗಿದೆ. ಇದರ ಹೊರತಾಗಿಯೂ ಕೆಲವು ವಿದ್ಯಾರ್ಥಿಗಳು ಅಶಿಸ್ತಿನಿಂದ ವರ್ತಿಸಿರುವ ಘಟನೆಗಳು ನಡೆದಿವೆ. ಇದರಿಂದ ಇತರ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಹಾಗೂ ಕಲಿಕಾ ವಾತಾವರಣದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಹಾಗಾಗಿ ಇಂತಹ ಯಾವುದೇ ರೀತಿಯ ಅಶಿಸ್ತಿನ ನಡವಳಿಕೆಗೆ ವಾರ್ಡನ್ ಗಳು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಅವರು ಸೂಚನೆ ನೀಡಿದರು.

ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ೨೦೨೫-೨೬ ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಹಾಸ್ಟೆಲ್ ನಿರ್ವಹಣೆ ಮತ್ತು ಕುಂದು ಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿನಿಲಯಗಳಲ್ಲಿ ಅಶಿಸ್ತಿನ ವರ್ತನೆಯ ಘಟನೆಗಳು ಘಟಿಸಿದಾಗ ಅಥವಾ ಅಂತಹ ಸನ್ನಿವೇಶ ಘಟಿಸುವ ಸೂಚನೆ ಸಿಕ್ಕಿದ್ದಲ್ಲಿ ಕೂಡಲೇ ಸಮಿತಿಯ ಗಮನಕ್ಕೆ ತರಬೇಕು ಎಂದು ಸಭೆಗೆ ತಿಳಿಸಿದರು.

ಕಳೆದ ಎರಡು ವರ್ಷಗಳಿಂದ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಗಳಲ್ಲಿ ವಿಪರೀತ ಬೇಡಿಕೆ ಇದ್ದು ಪ್ರತಿ ವರ್ಷ ಸರಾಸರಿ ೧೫೦ ರಿಂದ ೨೦೦ ವಿದ್ಯಾರ್ಥಿಗಳು ಅರ್ಜಿ ಹಾಕಿಯೂ ಹಾಸ್ಟೆಲ್ ವಂಚಿತರಾಗಿರುವ ಬಗ್ಗೆ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ ಹಿನ್ನಲೆಯಲ್ಲಿ ಕುಂದಾಪುರ ಶಾಸಕರಾ ಕಿರಣ್ ಕುಮಾರ್ ಕೊಡ್ಗಿಯವರ ಜೊತೆಗೂಡಿ ಈ ಬಗ್ಗೆ ಕಳೆದ ಹಲವು ಅಧಿವೇಶನಗಳಲ್ಲಿ ಸರಕಾರದ ಗಮನ ಸೆಳೆಯಲಾಗಿದೆ. ಹಾಸ್ಟೆಲ್ ಸೀಟು ಕೊರತೆ ಬಗ್ಗೆ ಕಳೆದ ೫ ವರ್ಷಗಳ ದತ್ತಾಂಶವನ್ನು ಒದಗಿಸಿ ಅದರ ಆಧಾರದ ಮೇಲೆ ಕುಂದಾಪುರ ಭಾಗದಲ್ಲಿ ಹೊಸ ಹಾಸ್ಟೆಲ್ ಮಂಜೂರಾತಿಗೆ ಸಚಿವರಿಗೆ ಮತ್ತೊಮ್ಮೆ ಮನವಿ ಮಾಡಲಾಗುವುದು ಎಂದರು.

ಸಭೆಯಲ್ಲಿ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಕುಮಾರ್ ಹುಕ್ಕೇರಿ, ಬೈಂದೂರು ತಾಲೂಕು ಪಂಚಾಯತ್ ಇ‌ಓ ರಾಜ್ ಕುಮಾರ್, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಹಿಂದುಳಿದ ವರ್ಗಗಳ ಇಲಾಖೆ ತಾಲೂಕು ಅಧಿಕಾರಿ ಶಶಿಕಲಾ ಹಾಗೂ ವಿವಿಧ ಹಾಸ್ಟೆಲ್ ಗಳ ವಾರ್ಡನ್ ಗಳು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!