spot_img
Wednesday, April 1, 2026
spot_img

ಬೈಂದೂರು: ‘ಗಮ್ಮತ್ತ್ ‘ ಕಾರ್ಯಕ್ರಮದ ಪೋಸ್ಟರ್ ಅನಾವರಣ

ಬೈಂದೂರು:  ಕುಂದಾಪ್ರ ಕನ್ನಡವೆಂಬುದು ಕನ್ನಡದ ವಿಶಿಷ್ಟ ಭಾಷಾ ಪ್ರಕಾರವಾಗಿದೆ. ಭಾಷೆಯ ಅಭಿಮಾನ ಎಲ್ಲಾ ಭಾವನೆಗಳನ್ನು ಮೀರಿ ಒಂದುಗೂಡಿಸುವಂತಿದ್ದರೆ ಅದು ವಿಶಿಷ್ಟವಾದ ಅನುಭೂತಿಯೇ ಸರಿ. ಕುಂದಾಪ್ರಕನ್ನಡ ಭಾಷೆ ಆಡುಭಾಷೆಯಾಗಿರುವುದರ ಜೊತೆಗೆ ದಾಖಲಿಕರಣ ಕಾರ್ಯವೂ ಹೆಚ್ಚೆಚ್ಚು ನಡೆಯಲಿ ಎಂದು ಹಿರಿಯ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು.

ಅವರು‌ಉಪ್ಪುಂದ ಶಂಕರ ಕಲಾಮಂದಿರದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಗಮ್ಮತ್ತ್ ಕಾರ್ಯಕ್ರಮದ ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿದರು.ಕರಾವಳಿಯ ಜನರಿಗೆ ವಿಶ್ವದಾದ್ಯಂತ ಮಾನ್ಯತೆ‌ಇದೆ.ಎಲ್ಲರೊಂದಿಗೂ ಹೊಂದಿಕೊಂಡು ಬದುಕುವ ಹಾಗೂ ವಿಶೇಷವಾದುದನ್ನು ಸಾಧಿಸುವಗುಣ ಕರಾವಳಿಗರಿಗೆ ಮೈಗೂಡಿದೆ ಎಂದರು.

ಬೈಂದೂರಿನ ಕುಂದಾಪ್ರಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಪ್ರಾಸ್ತಾವಿಕ ಮಾತನಾಡಿ, ಕಳೆದ ಭಾರಿಯಂತೆ ಈ ಭಾರಿಯೂ ಕುಂದಾಪ್ರಕನ್ನಡ ದಿನದ ಅಂಗವಾಗಿ ಗಮ್ಮತ್ತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಗಸ್ಟ್ 3ರ ಭಾನುವಾರ ಬೆಳಿಗ್ಗೆಯಿಂದ ಸಂಜೆಯ ತನಕ ಯಡ್ತರೆ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಹಾಲ್ನಲ್ಲಿ ದಿನವಿಡಿ ಕಾರ್ಯಕ್ರಮಗಳು ಜರುಗಲಿದೆ. ಈ ಭಾರಿ‌ ಇನ್ನಷ್ಟು ಕ್ರೀಡೆ, ಸಾಹಿತ್ತಿಕ ಕಾರ್ಯಕ್ರಮಗಳನ್ನು ಒಳಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಬೇಕಿದೆ‌ ಎಂದರು.
ಈ ವೇಳೆ ಸಾಹಿತಿ ಉಪ್ಪುಂದಚಂದ್ರಶೇಖರ ಹೊಳ್ಳ ಅವರನ್ನು ಸಮಿತಿ ವತಿಯಿಂದ ಗೌರವಿಸಲಾಯಿತು. ಈ ವೇಳೆ ಉದ್ಯಮಿ ಎನ್. ದಿವಾಕರ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ತಾಲೂಕು ಘಟಕ ಅಧ್ಯಕ್ಷ ಅರುಣ್ ಕುಮಾರ್ ಶಿರೂರು, ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯದರ್ಶಿ ಸುನಿಲ್ ಬೈಂದೂರು ಉಪಸ್ಥಿತರಿದ್ದರು.

ಕುಂದಾಪ್ರಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಸಂಚಾಲಕ ಸುಬ್ರಹ್ಮಣ್ಯ ಜಿ. ಉಪ್ಪುಂದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!