spot_img
Thursday, April 2, 2026
spot_img

‘ವಂಡ್ಸೆ ಸಂಪೂರ್ಣ ಸಾಕ್ಷರತಾ ಪಂಚಾಯತ್’ ಘೋಷಣೆ

ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜು.10ರಂದು ಸಂಪೂರ್ಣ ಸಾಕ್ಷರ ಕಾರ್ಯಕ್ರಮದಲ್ಲಿ ‘ವಂಡ್ಸೆ ಸಂಪೂರ್ಣ ಸಾಕ್ಷರತಾ ಪಂಚಾಯತ್ ಘೋಷಣೆ’ ಮಾಡುವುದರೊಂದಿಗೆ ಈ ಕಾರ್ಯಕ್ರಮದಲ್ಲಿ ದುಡಿದ ಸ್ವಯಂಸೇವಕರಾದ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಪಂಚಾಯತ್ ವತಿಯಿಂದ ಸನ್ಮಾನಿಸಿ, ಸಾಕ್ಷರತಾ ಇಲಾಖೆ ನೀಡಿದ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಸಾಕ್ಷರತಾ ಸ್ವಯಂಸೇವಕರಾದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಾದ ಸರೋಜಾ, ವನಿತಾ, ಪ್ರಮೀಳಾ, ಅಕ್ಕಮ್ಮ, ರೇಖಾ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಗೀತಾ ಅವಿನಾಶ್, ಉಪಾಧ್ಯಕ್ಷರಾದ ಗೋವರ್ಧನ್ ಜೋಗಿ, ಸದಸ್ಯರಾದ ಉದಯ್ ಕುಮಾರ್ ಶೆಟ್ಟಿ ಪ್ರಶಾಂತ್ ಪೂಜಾರಿ, ಸುಬ್ಬು, ಶಶಿಕಲಾ ವಂಡ್ಸೆ, ಸುಶೀಲಾ, ಕಾರ್ಯದರ್ಶಿ ಸುರೇಶ ಎ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತಿಸಿದರು. ವಂಡ್ಸೆ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!