spot_img
Tuesday, March 31, 2026
spot_img

ಹೊಸೂರು ಪ್ರೌಢಶಾಲೆಯಲ್ಲಿ ಡೆಂಗ್ಯೂ, ಮಲೇರಿಯಾ ಕುರಿತು ಆರೋಗ್ಯ ಮಾಹಿತಿ

ಕುಂದಾಪುರ: ನಿಂತ ನೀರಿನಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳನ್ನು ಹರಡುವ ಸೊಳ್ಳೆಗಳು ಹುಟ್ಟಿಕೊಳ್ಳುತ್ತವೆ. ಹಾಗಾಗಿ ನಮ್ಮ ಮನೆ, ಶಾಲೆ ಹೀಗೆ ನಾವು ವಾಸಿಸುವ ಪರಿಸರ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳು ನಮ್ಮನ್ನು ಕಚ್ಚದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ನಾವು ತೆಗೆದುಕೊಳ್ಳಬೇಕು. ಇಂತಹ ರೋಗಗಳ ಲಕ್ಷಣಗಳು ಕಂಡು ಬಂದಲ್ಲಿ, ಕೂಡಲೇ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ, ಸೂಕ್ತ ಔಷಧಿಗಳನ್ನು ತೆಗೆದು ಕೊಳ್ಳಬೇಕು ಎಂದು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಮಧು ಕುಮಾರ್ ಹೇಳಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಹೊಸೂರು ಪ್ರೌಢಶಾಲೆಯಲ್ಲಿ ನಡೆದ ಡೆಂಗ್ಯೂ ಮತ್ತು ಮಲೇರಿಯಾ ರೋಗಗಳ ಬಗ್ಗೆ ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಕಾಂತಿ ಕೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಆರೋಗ್ಯ ಸಂರಕ್ಷಣಾಧಿಕಾರಿ ನಾಗರತ್ನ, ಹೊಸೂರು ಆರೋಗ್ಯ ಉಪ ಕೇಂದ್ರದ ಸಿ.ಎಚ್.ಓ. ದೀಪಾ ಕುಮಾರಿ, ಆಶಾ ಕಾರ್ಯಕರ್ತೆ ಕಲ್ಪನಾ ಉಪಸ್ಥಿತರಿದ್ದರು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಶೆಟ್ಟಿ ಸ್ವಾಗತಿಸಿ, ಸಹಶಿಕ್ಷಕರಾದ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಹೆರಿಯಣ್ಣ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!