spot_img
Tuesday, March 31, 2026
spot_img

ಹಕ್ಲಾಡಿಯಲ್ಲಿ ದಿ| ಭಾಸ್ಕರ್ ಶೆಟ್ಟಿ ಅವರ 66ನೇ ಜನ್ಮದಿನ: ‘ಮನೆಗೊಂದು ಸಸಿ’ ಅಭಿಯಾನ

ಕುಂದಾಪುರ : ಹಕ್ಲಾಡಿಯ ಶ್ರೀ ಕೊಳ್ಕೆಬಲು ಸೂರಪ್ಪ ಶೆಟ್ಟಿ ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಅನೇಕ ರೀತಿಯ ನೆರವನಿತ್ತ ದಾನಿ ದಿ| ಭಾಸ್ಕರ್ ಶೆಟ್ಟಿ ಅವರ 66ನೇ ಜನ್ಮದಿನದ ಅಂಗವಾಗಿ ಬುಧವಾರ ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಫಾರೆಸ್ಟ್ ಎಸ್‌ಒ‌ಎಸ್ ಎನ್‌ಜಿ‌ಒ, ಭಾಸ್ಕರ ಶೆಟ್ಟರ ಅಭಿಮಾನಿ ಬಳಗ ಹಾಗೂ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ವನಮಹೋತ್ಸವ-‘ಮನೆಗೊಂದು ಸಸಿ’ ನೆಡುವ ಅಭಿಯಾನ ನಡೆಯಿತು.
ಮನೆಗೊಂದು ಸಸಿ ಅಭಿಯಾನದಡಿಯಲ್ಲಿ ಸಾವಿರಕ್ಕೂ ಮಿಕ್ಕಿ ಸಸಿಗಳನ್ನು ವಿತರಣೆ ಮಾಡಲಾಯಿತು. ಗ್ರಾಮಸ್ಥರು ಉತ್ಸಾಹದಿಂದ ಈ ಅಭಿಯಾನಕ್ಕೆ ಕೈಜೋಡಿಸಿದರು.
ಹಕ್ಲಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮಣ್ಣಿನ ಆಟ ಮತ್ತು ವನ್ಯಜೀವಿ ಅರಿವು ಕಾರ್ಯಾಗಾರಗಳಲ್ಲಿ ಪಾಲ್ಗೊಂಡರು. ಬೆಂಗಳೂರಿನ ಗಣೇಶ್ ಶ್ರೀನಿವಾಸನ್ ಮತ್ತು ಬಂಡೀಪುರ ಅರಣ್ಯಾಧಿಕಾರಿ ಮೋಹನ್ ಕುಮಾರ್ ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು.
ಅರಣ್ಯ ಇಲಾಖೆಯ ಅಽಕಾರಿಗಳು, ಊರ ಪ್ರಮುಖರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಭಾಸ್ಕರ ಶೆಟ್ಟರ ಅಭಿಮಾನಿ ಬಳಗದವರು, ಗ್ರಾಮಸ್ಥರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!