spot_img
Wednesday, March 18, 2026
spot_img

ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಶಾಲೆಯಲ್ಲಿ ಗುರು ಪೂರ್ಣಿಮೆ ಆಚರಣೆ

ಶಂಕರನಾರಾಯಣ: ಗುರು ಎಂದರೆ ವ್ಯಕ್ತಿಯಲ್ಲ, ಅದೊಂದು ಶಕ್ತಿ. ಗುರು ಶಿಷ್ಯರ ನಡುವೆ ಇರುವ ಪವಿತ್ರ ಬಾಂಧವ್ಯದ ಪ್ರತೀಕವಾದ ಗುರುಪೂರ್ಣಿಮೆ ದಿನವನ್ನು ಮದರ್ ತೆರೆಸಾ ಮೆಮೋರಿಯಲ್ ಶಾಲಾ ವಿಭಾಗದಲ್ಲಿ ಜು.10 ರಂದು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗುರುವಿನ ಮೇಲೆ ಇರುವ ಭಕ್ತಿ ಹಾಗೂ ಗುರು ಶಿಷ್ಯರ ನಡುವಿನ ಬಾಂಧವ್ಯವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಪ್ರಹಸನ, ಭಾಷಣ ನೃತ್ಯ ಹಾಗೂ ಸಂಗೀತದ ಮೂಲಕ ತಿಳಿಸಿದರು. ಗುರುಗಳ ಆಶೀರ್ವಾದವನ್ನು ಪಡೆದ ವಿದ್ಯಾರ್ಥಿಗಳಲ್ಲಿ ವಿದ್ಯೆಯ ಜೊತೆಗಿರುವ ಸಂಸ್ಕಾರವನ್ನು ಗುರುತಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸಿದರು.

ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಗುರುವಿನ ಮಹತ್ವವನ್ನು ಸಾರುವ ಮೂಲಕ ಗುರು ಪೂರ್ಣಿಮಾ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.
ಆಡಳಿತ ಮಂಡಳಿಯವರು ಶಿಕ್ಷಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!