spot_img
Thursday, March 19, 2026
spot_img

ಕೋಟ ವಿವೇಕ ಪದವಿಪೂರ್ವ ಕಾಲೇಜು: ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮ

ಕೋಟ: ವಿವೇಕ ಪದವಿಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು.

ಉದ್ಘಾಟಕರಾಗಿ, ಪ್ರೊ. ಬಾಲಕೃಷ್ಣ ಶೆಟ್ಟಿ ನಿವೃತ್ತ ಪ್ರಾಂಶುಪಾಲರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಥಮ ದರ್ಜೆ ಕಾಲೇಜು ಕಟೀಲು ಇವರು ಆಗಮಿಸಿ ತಮ್ಮ ನುಡಿಮುತ್ತುಗಳ ಮೂಲಕ ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಮಾತನಾಡಿ ‘ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಸುಪ್ತ ಪ್ರತಿಭೆ ಇರುತ್ತದೆ ಅದನ್ನು ವ್ಯಕ್ತಪಡಿಸಲು ಉತ್ತಮ ಲೇಖಕರ ಕೃತಿಗಳನ್ನು ಓದಿ ಸರಿಯಾಗಿ ಅರ್ಥೈಸಿಕೊಂಡು ಕಥೆ ಕವನ, ಹನಿಗವನ ಲೇಖನಗಳನ್ನು ಬರೆಯುವ ಅಭ್ಯಾಸ ವಿದ್ಯಾರ್ಥಿ ದೆಸೆಯಲ್ಲಿ ರೂಡಿಸಿಕೊಳ್ಳಬೇಕು, ಸಾಹಿತ್ಯವು ಮನುಷ್ಯ ಮನುಷ್ಯರ ನಡುವೆ ಸಹೃದಯತೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳು ಫೇಸ್ಬುಕ್, ವಾಟ್ಸಾಪ್ ಇನ್ಸಟಾ ಗ್ರಾಂ ಮುಂತಾದವುಗಳಲ್ಲಿ ವ್ಯರ್ಥವಾಗಿ ಸಮಯವನ್ನು ಹಾಳು ಮಾಡುವುದರ ಬದಲು ಸಾಹಿತ್ಯದಲ್ಲಿ ಅಭಿರುಚಿಯನ್ನ ಬೆಳೆಸಿಕೊಂಡು ಹೃದಯವಂತರಾಗಬೇಕೆ0ದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ನಾವುಡರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಭೂಮಿಕಾ ಕಾರ್ಯಕ್ರಮ ನಿರ್ವಹಿಸಿ, ಉಪನ್ಯಾಸಕ ಸದಾಶಿವ ಹೊಳ್ಳ ವಂದಿಸಿದರು. ಸಂಘದ ಸಂಚಾಲಕ ಚಂದ್ರಶೇಖರ ಎಚ್. ಎಸ್ ಕಾರ್ಯಕ್ರಮ ಸಂಯೋಜಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!