spot_img
Thursday, March 19, 2026
spot_img

ಹುಲಿಕಲ್ ಘಾಟ್ ರಸ್ತೆ ಅಭಿವೃದ್ಧಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಶಾಸಕ ಗಂಟಿಹೊಳೆ

ಕುಂದಾಪುರ: ಹೊಸಂಗಡಿಯಿಂದ ಶಿವಮೊಗ್ಗ ಜಿಲ್ಲೆಯ ಗಡಿಯ ತನಕದ ಹುಲಿಕಲ್ ಘಾಟಿಯನ್ನು ಅಭಿವೃದ್ಧಿಗೊಳಿಸುವಂತೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಪತ್ರ ಮುಖೇನ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಶಾಸಕ ಗಂಟಿಹೊಳೆ, ಘಾಟಿಯ ಇಕ್ಕೆಲಗಳಲ್ಲಿ ಅಪಾಯಕಾರಿ ಮರಗಳಿವೆ, ರಸ್ತೆ ಸಂಪೂರ್ಣ ಹಾಳಾಗಿದ್ದು, ಕೆಲವೆಡೆ ಎರಡು ವಾಹನಗಳು ಚಲಿಸುವಷ್ಟು ವಿಶಾಲವಾಗಿಲ್ಲ. ಕೆಲವು ಕಡೆ ತಡೆಗೋಡೆಯೂ ಇಲ್ಲ ಹಾಗೂ ಇರುವ ಕಡೆ ದುರ್ಬಲಗೊಂಡಿವೆ. ಘಾಟಿ ಸಂಪರ್ಕಿಸುವ ರಸ್ತೆಯನ್ನೂ ಅಭಿವೃದ್ಧಿ ಪಡಿಸುವ ಅಗತ್ಯವಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದರು.

ಬೈಂದೂರು ಕ್ಷೇತ್ರದ, ಕುಂದಾಪುರ ತಾಲ್ಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52 ರಲ್ಲಿ 46.45 ಕೀ.ಮಿನಿಂದ 50.18 ಕೀ.ಮಿವರೆಗಿನ ಸುಮಾರು 11 ಕೀ.ಮಿ ರಸ್ತೆ ಅಭಿವೃದ್ಧಿ ಪಡಿಸಲು ರೂ. 39.50 ಕೋಟಿ ಅಂದಾಜಿಸಲಾಗಿದ್ದು, ಪ್ರಸ್ತಾವನೆ ತಯಾರಿಸಿ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಗಳಿಗೆ ನೀಡಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!