spot_img
Thursday, March 19, 2026
spot_img

ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜು : ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ

ಕಾರ್ಕಳ: ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 11 ಜುಲೈ ರಂದು 6/8 ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು.

ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ರವರು ಮಾತನಾಡಿ ಎನ್.ಸಿ.ಸಿ ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ಎನ್.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, “ಯುವಜನತೆ ರಾಷ್ಟ್ರದ ಭವಿಷ್ಯ, ಅವರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ” ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಎಂ.ಎ ಮುಲ್ತಾನಿ, ಪಿ.ಐ ಸ್ಟಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಆಂಗ್ಲ ಭಾಷಾ ಉಪನ್ಯಾಸಕ ಮಹೇಶ್ ಆರ್. ಶೆಣೈ ಕೆ. ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಸುದೀಕ್ಷಾ ಎಸ್. ಪೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!