spot_img
Monday, March 16, 2026
spot_img

ಹೆಸ್ಕತ್ತೂರು ಪ್ರೌಢಶಾಲೆಯಲ್ಲಿ ಯಕ್ಷಗಾನ ಹೆಜ್ಜೆ ತರಬೇತಿ ತರಗತಿ ಉದ್ಘಾಟನೆ

ಕುಂದಾಪುರ: ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರು ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಉಚಿತ ಹೆಜ್ಜೆ ತರಬೇತಿ ತರಗತಿಯನ್ನು ಯಕ್ಷಗಾನದ ಹಿರಿಯ ಹಾಗೂ ಸರ್ವಾಂಗ ಗುರುಗಳಾದ ದೇವದಾಸ್ ರಾವ್ ಕೂಡ್ಲಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದೆ ಯಕ್ಷಗಾನ ಕಲಿಯುವ ಆಸಕ್ತಿ ಇದ್ದರೂ ಕಲಿಯಲು ಬಹಳ ದೂರದವರೆಗೆ ಹೋಗಬೇಕಾಗಿತ್ತು. ಮೇಲಾಗಿ ಹಣವನ್ನು ಖರ್ಚು ಮಾಡಬೇಕಾಗಿತ್ತು. ಈಗ ವಿದ್ಯಾರ್ಥಿಗಳಿಗೆ ಉಚಿತವಾಗಿ ಒಂದು ಉತ್ತಮವಾದ ಅವಕಾಶ ಒದಗಿ ಬಂದಿದೆ. ಯಕ್ಷಗಾನ ಗುರುಗಳಿಗೆ ನೀಡುವ ಸಂಭಾವನೆಯನ್ನು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರು ಭರಿಸಲಿದ್ದಾರೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೆಜ್ಜೆ ತರಬೇತಿಗೆ ಹೆಸರು ನೋಂದಾಯಿಸಿರುವುದು ಉತ್ತಮ ಬೆಳವಣಿಗೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಕೊರ್ಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಮಾವತಿ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಯಕ್ಷಗಾನ ಹೆಜ್ಜೆಯನ್ನು ಕಲಿಸಲು ಗುರುತಿಸಲಾದ ಗುರುಗಳು ಐರೋಡಿ ಮಂಜುನಾಥ ಕುಲಾಲ ಯಡ್ತಾಡಿ ಇವರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ಸ್ವಾಗತಿಸಿ, ಪ್ರಸ್ತಾವನೆ ಗೈದು ಉದ್ಘಾಟಕರನ್ನು ಪರಿಚಯಿಸಿದರು. ದೇವದಾಸ್ ರಾವ್ ಕೂಡ್ಲಿ ಇವರಿಗೆ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಶಿಕ್ಷಕ ಉದಯಕುಮಾರ್ ಶೆಟ್ಟಿ ವಂದಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ತರಬೇತಿಯ ನೋಡಲ್ ಶಿಕ್ಷಕ ಹಾಗೂ ಆಂಗ್ಲ ಭಾಷಾ ಶಿಕ್ಷಕ ಗೋಪಾಲ ಸೋಮಯಾಜಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!