spot_img
Monday, March 16, 2026
spot_img

ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜು: ಗ್ರಾಜುಯೇಷನ್ ಡೇ’

ಕುಂದಾಪುರ: ಪದವಿಯಲ್ಲಿ ಗಳಿಸಿದ ಮಾಹಿತಿಯನ್ನು ಜ್ಞಾನವಾಗಿ ಪರಿವರ್ತಿಸಿಕೊಳ್ಳಿ, ಆ ಮೂಲಕ ಸಾಮಾಜಿಕ ಮತ್ತು ವೈಯಕ್ತಿಕ ಬದುಕನ್ನು ಮೌಲ್ಯಪೂರ್ಣವಾಗಿ ರೂಪಿಸಿಕೊಳ್ಳಲು ಸಾಧ್ಯ ಎಂದು ಜಾನಪದ ವಿಶ್ವವಿದ್ಯಾನಿಲಯ ಹಾವೇರಿಯ ವಿಶ್ರಾಂತ ಕುಲಪತಿಗಳಾದ ಡಾ| ಕೆ. ಚಿನ್ನಪ್ಪ ಗೌಡ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂ‌ಎಸಿ ಸಂಯೋಜಿಸಿದ ‘ಗ್ರಾಜುಯೇಷನ್ ಡೇ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಮಣಿಪಾಲದ ಪತ್ರಕರ್ತ ಮೋಹನ್ಚಂದ್ರ ನಂಬಿಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಪದವಿ ಪ್ರದಾನ ದಿನದ ಸಂದೇಶವನ್ನು ವಾಚಿಸಿದರು.
ಕಾರ್ಯಕ್ರಮ ಸಂಯೋಜಕರು ಹಾಗೂ ಐಕ್ಯೂ‌ಎಸಿ ಸಂಯೋಜಕಿ ದೀಪಿಕಾ ಜಿ. ಸ್ವಾಗತಿಸಿದರು. ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಶೈಕ್ಷಣಿಕ ನಿಕಾಯಕರಾದ ಗಿರಿರಾಜ್ ಭಟ್ ಅತಿಥಿಗಳನ್ನು ಪರಿಚಯಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ವಂದಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!