spot_img
Monday, March 16, 2026
spot_img

ಕುಂದಾಪುರ: ಶಕ್ತಿ ಯೋಜನೆಯಲ್ಲಿ ‘500 ಕೋಟಿ ಪ್ರಯಾಣ ಸಂಭ್ರಮ’

ಕುಂದಾಪುರ: ರಾಜ್ಯ ಸರಕಾರದ ಮಹಿಳಾ ಸಬಲೀಕರಣ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿ ದಾಖಲೆ ನಿರ್ಮಿಸಿದ್ದು, ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿಯ ವತಿಯಿಂದ 500 ಕೋಟಿ ಸಂಭ್ರಮ ಕಾರ್ಯಕ್ರಮ ಕುಂದಾಪುರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆಯಿತು.

ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷರಾದ ಹೆಚ್.ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಚುನಾವಣೆ ಪೂರ್ವದಲ್ಲಿ ನೀಡಿದ ಆಶ್ವಾಸನೆಯಂತೆ ಪಂಚಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಅದರಲ್ಲೂ ಶಕ್ತಿ ಯೋಜನೆ ಅತ್ಯಂತ ಯಶಸ್ವಿ ಯೋಜನೆಯಾಗಿ ಹೊರಹೊಮ್ಮಿದೆ. ಶಕ್ತಿ ಯೋಜನೆಯಲ್ಲಿ ಈಗಾಗಲೇ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ.ಈ ಸಂದರ್ಭದಲ್ಲಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ ಮಾತನಾಡಿ, ಶಕ್ತಿ ಯೋಜನೆ ಅತ್ಯಂತ ಮಹತ್ವಕಾಂಕ್ಷಿ ಯೋಜನೆ. ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತನ್ನು ಈ ಯೋಜನೆ ನೀಡಿದೆ. ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಕೂಡಾ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ವಿರೋಧ ಪಕ್ಷಗಳು ಏನೇ ಅಪಪ್ರಚಾರ ಮಾಡಿದರೂ ಕೂಡಾ ಜನ ಅದನ್ನು ನಂಬಬಾರದು. ಗ್ಯಾರಂಟಿ ಯೋಜನೆಗಳು ಯಥಾರೀತಿ ಮುಂದುವರಿಯಲಿದೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿಯ ಸದಸ್ಯರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಕಾಂಗ್ರೆಸ್ ಅಧ್ಯಕ್ಷ ವಿಕಾಸ್ ಹೆಗ್ಡೆ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ನಂತರ ಸಿಹಿ ಹಂಚಿ ಸಂಭ್ರಮಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!