spot_img
Monday, March 16, 2026
spot_img

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

ಶಿವಮೊಗ್ಗ: ದೇಶದ ಎರಡನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಸಿಗಂದೂರು ಸೇತುವೆಯನ್ನು ಜುಲೈ 14ರಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಿದರು.

ಹೊಳೆಬಾಗಿಲಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ಸಂಪರ್ಕಿಸುವ ಈ ಸೇತುವೆ ಆರು ದಶಕಗಳಿಂದ ಕಾತರಿಸುತ್ತಿದ್ದ ಶರಾವತಿ ಹಿನ್ನೀರು ಭಾಗದ ಕನಸಾಗಿದೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಶಿವಮೊಗ್ಗ ಸಂಸದರಾದ ಬಿ. ವೈ. ರಾಘವೇಂದ್ರ, ಶಾಸಕರಾದ ಗುರುರಾಜ ಗಂಟಿಹೊಳೆ, ಆರಗ ಜ್ಞಾನೇಂದ್ರ, ಎಸ್‌ಎನ್ ಚನ್ನಬಸಪ್ಪ, ಡಿ‌ಎಸ್ ಅರುಣ್, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ ಮೊದಲಾದವರು ಉಪಸ್ಥಿತರಿದ್ದರು.

ಶರಾವತಿ ನದಿ ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423 ಕೋಟಿ ಅನುದಾನದಲ್ಲಿ ದೇಶದ ಎರಡನೇ ಅತಿ ದೊಡ್ಡ ಸಂಪರ್ಕ ಸೇತುವೆ “ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು – ಕೊಲ್ಲೂರು (ಸ್ಥಳೀಯರ ಹೊಳೆಬಾಗಿಲು ಸೇತುವೆ)” ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಈ ಒಂದು ಸೇತುವೆ ಕೇವಲ ಶರಾವತಿ ಹಿನ್ನೀರಿನ ಸಂತ್ರಸ್ತರ ಬವಣೆ ಮಾತ್ರ ನೀಗಿಸುವುದಲ್ಲದೆ ನಮ್ಮ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಇನ್ನಷ್ಟು ಬಾಂಧವ್ಯ ಬೆಸೆಯುವ ಕಾಲಘಟಕ್ಕೆ ಮುನ್ನುಡಿ ಬರೆಯುವುದು ನಿಶ್ಚಿತ. ಜೊತೆಗೆ ಎರಡು ಜಿಲ್ಲೆಗಳ ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ ಹಾಗೂ ವೈವಿಧ್ಯಮಯ ಸಂಸ್ಕೃತಿಗಳ ಸಮ್ಮಿಲನ ಗಟ್ಟಿಯಾಗುವುದು ಹೊಸ ಶಖೆಯ ಆರಂಭಕ್ಕೆ ಸಾಕ್ಷಿಯಾಗಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!