spot_img
Monday, March 16, 2026
spot_img

ಗದ್ದೆಗಿಳಿದು ಕೃಷಿ ಪಾಠ ಕಲಿತ ತುಳಸಿ ವಿದ್ಯಾ ಮಂದಿರದ ವಿದ್ಯಾರ್ಥಿಗಳು

kundapura:  ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಕೃಷಿಯ ಅರಿವನ್ನು ಪಡೆದುಕೊಂಡರು.
 ಹಳ್ನಾಡಿನ ಸಮೀಪದ ,ಮೊಗವೀರ ಸಂಘಟನೆಯ ಅಧ್ಯಕ್ಷರು, ಕೃಷಿಕರಾದ  ನಾಗೇಶ್ ಮೊಗವೀರ ಇವರ ಗದ್ದೆಯಲ್ಲಿ ಶನಿವಾರ ನಡೆದ ಪ್ರಾತ್ಯಕ್ಷಿಕೆಯಲ್ಲಿ 6, 7 ಮತ್ತು 8ನೇ ತರಗತಿ ಮಕ್ಕಳು ಭಾಗವಹಿಸಿ ಕೃಷಿ ಜ್ಞಾನ, ಪ್ರಸ್ತುತ ಕೃಷಿ ಭೂಮಿಯಲ್ಲಿ ರೈತರ ಸಮಸ್ಯೆ , ಕೃಷಿಯಲ್ಲಿ ಹೊಸ ತಂತ್ರಜ್ಞಾನಗಳು ಮುಂತಾದ ಮಾಹಿತಿಗಳನ್ನು ತಿಳಿದುಕೊಂಡರು.
  ಶಾಲಾ ಮುಖ್ಯ ಶಿಕ್ಷಕಿ ರೇಷ್ಮ ಪ್ರದೀಪ್ ಮುಂಚೂಣಿಯಲ್ಲಿ ಈ ಕೃಷಿ ಪ್ರಾತ್ಯಕ್ಷಿಕೆ ನಡೆಯಿತು. ಆಡಳಿತ ಮಂಡಳಿ ಸದಸ್ಯರು, ಶಿಕ್ಷಕೇತರ ಸಿಬ್ಬಂದಿ, ಹಾಗೂ ಶಿಕ್ಷಕರು ಈ ಪ್ರಾತ್ಯಕ್ಷಿಕೆಯಲ್ಲಿ ಮಕ್ಕಳ ಜೊತೆಯಲ್ಲಿದ್ದರು.
    ಸುರಿಯುವ ಮಳೆಯ ನಡುವೆಯೂ ನಾಟಿ ಮಾಡುವ ಮೂಲಕ ಮಕ್ಕಳು ಕೃಷಿ ಸಂಭ್ರಮವನ್ನು ಅನುಭವಿಸಿದರು. ಶಾಲಾ ಆಟಪಾಠಗಳ ಜೊತೆ ನೈಜ ಬದುಕಿನಲ್ಲಿ ಕೃಷಿ ಕಲಿಕೆಯನ್ನು ಅರ್ಥಮಾಡಿಸುವ ನಿಟ್ಟಿನಲ್ಲಿ ಅನ್ನ ಮೂಲದ ಅರಿವನ್ನು ಮಕ್ಕಳಲ್ಲಿ ತಿಳಿಸಲು ತುಳಸಿ ವಿದ್ಯಾ ಸಂಸ್ಥೆಯು ಈ ಕೃಷಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!