spot_img
Thursday, April 2, 2026
spot_img

ನಾಪತ್ತೆಯಾದ ಮೀನುಗಾರ ಪತ್ತೆಗೆ ತುರ್ತು ಕ್ರಮದ ಜತೆಗೆ ತುರ್ತು ಪರಿಹಾರದ ವ್ಯವಸ್ಥೆ-ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಒರ್ವ ಮೀನುಗಾರ ಅಪಾಯದಿಂದ ಪಾರಾಗಿದ್ದು ಮೂವರು ಮೀನುಗಾರರು ನಾಪತ್ತೆಯಾಗಿರುವ ಮಾಹಿತಿ ತಿಳಿದು ಬಂದಿದೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ತಿಳಿಸಿದ್ದಾರೆ.

ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ ಅಗತ್ಯ ಪರಿಹಾರ ಒದಗಿಸಲು ಶಾಸಕರಾದ ಯಶ್ ಪಾಲ್ ಸುವರ್ಣ ಸಹಿತ ಜಿಲ್ಲೆಯ ಶಾಸಕರ ಮೂಲಕ ಮೀನುಗಾರಿಕೆ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಇಲಾಖೆಯಿಂದ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ತುರ್ತಾಗಿ ಒದಗಿಸುವ ವ್ಯವಸ್ಥೆ ಆಗಿದೆ.

ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಜೋರಾಗಿರುತ್ತದೆ. ಹೀಗಾಗಿ ನಾಡದೋಣಿ, ಟ್ರಾಲ್ ದೋಣಿ ಮೀನುಗಾರರು ವಿಶೇಷ ಎಚ್ಚರಿಕೆ ವಹಿಸಬೇಕು ಮತ್ತು ಲೈಫ್ ಜಾಕೇಟ್ ಬಳಸುವುದನ್ನು ಆದಷ್ಟು ಕಡ್ಡಾಯ ಮಾಡಿಕೊಳ್ಳುವುದು ಉತ್ತಮ. ಲೈಫ್ ಜಾಕೇಟ್ ಬಳಸುವುದರಿಂದ ಜೀವ ಹಾನಿ ತಪ್ಪಿಸಲು ಸಾಧ್ಯವಿದೆ ಎಂದು ಶಾಸಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!