spot_img
Tuesday, June 23, 2026
spot_img

ಗಂಗೊಳ್ಳಿ ದೋಣಿ ದುರಂತ: ಸ್ಥಳಕ್ಕೆ ಸಂಸದರಾದ ಬಿ.ವೈ ರಾಘವೇಂದ್ರ, ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ (ಜು.15) ಸಂಭವಿಸಿದ ದೋಣಿ ದುರಂತದಲ್ಲಿ ಮೂವರು ಮೀನುಗಾರರು ನಾಪತ್ತೆಯಾಗಿದ್ದು ಸ್ಥಳಕ್ಕೆ ಕ್ಷೇತ್ರದ ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ, ಶೋಧ ಕಾರ್ಯ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಈ ದುರ್ಘಟನೆಯಲ್ಲಿ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಪತ್ತೆಕಾರ್ಯ ಚುರುಕುಗೊಳಿಸುವಂತೆ ಹಾಗೂ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ನಾನು, ಕೋಟ ಶ್ರೀನಿವಾಸ ಪೂಜಾರಿ ಅವರು ಹಾಗೂ ಶಾಸಕ ಗುರುರಾಜ ಗಂಟಿಹೊಳೆ ಅವರು ಸಚಿವರೊಂದಿಗೆ ಮಾತನಾಡಿದ್ದಾರೆ. ನಾಪತ್ತೆಯಾದ ಮೀನುಗಾರರ ದೇಹವಾದರೂ ಆದಷ್ಟು ಬೇಗ ಸಿಗಬೇಕಾಗಿದೆ. ಆ ನೆಲೆಯಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ನಾಳೆ ಮಧ್ಯಾಹ್ನದೊಳಗೆ ಪತ್ತೆಯಾಗದೇ ಇದ್ದರೆ ಸರಕಾರ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿ ಪತ್ತೆಕಾರ್ಯಕ್ಕೆ ವೇಗ ನೀಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನ್ಮಂ ಕುತ್ಯಾರು, ಮಂಡಲದ ಅಧ್ಯಕ್ಷೆ ಅನಿತಾ ಆರ್.ಕೆ, ಪ್ರಧಾನಕಾರ್ಯದರ್ಶಿ ಕರುಣ್ ಪೂಜಾರಿ, ಮಾಜಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಹಾಗೂ ಮೀನುಗಾರರ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!