spot_img
Monday, April 6, 2026
spot_img

ಸರಕಾರಿ ಪದವಿಪೂರ್ವ ಕಾಲೇಜು ನಾವುಂದ: ಪ್ರೋತ್ಸಾಹ ಧನದ ವಿತರಣೆ

ನಾವುಂದ: ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಇಲ್ಲಿ 1994-96 ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು  ಕೊಡುತ್ತಿರುವ ಪ್ರೋತ್ಸಾಹ ಧನದ ವಿತರಣೆ ಕಾರ್ಯಕ್ರಮ ನಡೆಯಿತು.

ಇದು ಹತ್ತನೇ ವರ್ಷದ ಕಾರ್ಯಕ್ರಮವಾಗಿದ್ದು ಈ ವರ್ಷ ದ್ವಿತೀಯ ಪಿ. ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ ದೀಪಕ್ ಶೆಟ್ಟಿ ಇವನಿಗೆ 15 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ನೀಡಲಾಯಿತು.

1994-96 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಯು .ಎಸ್. ಎ. ನ ಬೋಸ್ಟನ್ ನ  ಟಾಕೆಡ ಫಾರ್ಮಸಿಟಿಕಲ್ಸ್ ನಲ್ಲಿ ಎಸೋಸಿಯೇಟ್ ಡೈರೆಕ್ಟರ್ ಆಗಿರುವ ದೀಪಕ್ ಕಂಬದಕೋಣೆ ಇವರು ಆಗಮಿಸಿದ್ದರು. ಯಾವುದೇ ಸಂಸ್ಥೆಯಲ್ಲಿ ಕಲಿತರೂ ಮಕ್ಕಳ ಸ್ವ ಪ್ರಯತ್ನವೇ ಮುಖ್ಯ ಹಾಗೂ ಸಂವಹನ ಕಲೆಯನ್ನು ಈಗಿನಿಂದಲೇ ಉತ್ತಮಪಡಿಸಿಕೊಳ್ಳಬೇಕು ಎಂದರು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪಿಯುಸಿ ಮುಗಿದ ತಕ್ಷಣ ಇರುವಂತಹ ವಿಫುಲ ಅವಕಾಶಗಳ ಬಗ್ಗೆ ಕೂಡ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಇವರು ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆ ಮಾತ್ರ ಗುರಿಯಾಗಿಸಿಕೊಳ್ಳದೆ ಜ್ಞಾನವನ್ನು ಗಳಿಸುವತ್ತ ಗಮನ ಹರಿಸಬೇಕು ಎಂದು  ಹೇಳಿದರು.

ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನ ಪ್ರಾರ್ಥಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಭಟ್ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಜೀವನ್ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಇತಿಹಾಸ ಉಪನ್ಯಾಸಕರಾದ ಗಣೇಶ ಎಂ .ಮತ್ತು ಅರ್ಥಶಾಸ್ತ್ರ ಉಪನ್ಯಾಸಕಿ ನೇತ್ರಾವತಿ ಇವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!