spot_img
Sunday, March 15, 2026
spot_img

ಬೈಂದೂರು ತಾಲೂಕು ತುಳುವ ಮಹಾಸಭೆ ಸಂಚಾಲಕರಾಗಿ ಮೋಹನ ಮೊಗವೀರ ಆಯ್ಕೆ

ಕುಂದಾಪುರ: ಬೈಂದೂರು ತಾಲೂಕು ತುಳುವ ಮಹಾಸಭೆ ಸಂಚಾಲಕರಾಗಿ ಮೋಹನ ಮೊಗವೀರ ಗುಜ್ಜಾಡಿ ಅವರನ್ನು ನೇಮಕ ಮಾಡಲಾಗಿದೆ.

ತುಳುವ ಮಹಾಸಭೆ, 1928 ರಲ್ಲಿ ಹಿರಿಯ ತಿಲಕವಾದಿ ಎಸ್.ಯು.ಪಣಿಯಾಡಿಯವರ ನೇತೃತ್ವದಲ್ಲಿ ಸ್ಥಾಪನೆಯಾಗಿ, ತುಳು ಭಾಷೆ, ಸಂಸ್ಕೃತಿ, ಸಂಪ್ರದಾಯ ಹಾಗೂ ತುಳುವರ ಹಕ್ಕುಗಳ ಪರಿರಕ್ಷಣೆಯ ಸಂಕಲ್ಪದೊಂದಿಗೆ ಶತಮಾನೋತ್ಸವದತ್ತ ಪಯಣಿಸುತ್ತಿದೆ. ಮಹಾಸಭೆಯು ಈಗ ತುಳುನಾಡನ್ ಕಳರಿ (ಸಮರಕಲೆ, ಮರ್ಮ ಚಿಕಿತ್ಸಾ ತರಬೇತಿ), ದೈವ ಆರಾಧನೆಗಳ ಪುನರುಜ್ಜೀವನ, ತುಳುವೇಶ್ವರ ದೇವಾಲಯ ಪುನರ್ ನಿರ್ಮಾಣ, ಭಾಷಾ-ಜಾತಿ-ಮತ ಸೌಹಾರ್ದತೆ, ಪರಿಸರ ಸಂರಕ್ಷಣೆ ಹಾಗೂ ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿ ವೈಶಿಷ್ಟ್ಯಪೂರ್ಣ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ.

ಬೈಂದೂರು ತಾಲೂಕಿನಲ್ಲಿ ಅವರ ನೇತೃತ್ವದಲ್ಲಿ ತುಳು ಮತ್ತು ಕುಂದಗನ್ನಡ ಭಾಷಾ ಬಾಂಧವ್ಯ, ಸಾಂಸ್ಕೃತಿಕ ಚಟುವಟಿಕೆಗಳ ಪ್ರೋತ್ಸಾಹ, ಹಾಗೂ ಸಮುದಾಯದ ಸಂಘಟಿತ ಬಲವರ್ಧನೆಗೆ ನಿರೀಕ್ಷಿತ ಬೆಳವಣಿಗೆಗಳು ಸಂಭವಿಸಲಿವೆ ಎಂಬ ವಿಶ್ವಾಸವನ್ನು ತುಳುವ ಮಹಾಸಭೆಯ ಕೇಂದ್ರ ಸಮಿತಿ ವ್ಯಕ್ತಪಡಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!